Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಘೋಷಿತ ತುರ್ತು ಪರಿಸ್ಥಿತಿ ಇದೆ-ಖರ್ಗೆ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಂವಿಧಾನ ಬಚಾವೋ ಯಾತ್ರೆ ಮಾಡಿದ್ದರಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಕುರಿತು ಈಗ ಮಾತನಾಡತೊಡಗಿದ್ದಾರೆ ಎಂದು ಖರ್ಗೆ ದೂರಿದರು.

ತಮ್ಮ ಅಧಿಕಾರಾವಧಿಯಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗದವರೂ ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ಸಂವಿಧಾನ ಹತ್ಯೆ ದಿವಸ್ ಅಂತಾ ಆಚರಿಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಟೀಕಾಪ್ರಹಾರ ಮಾಡಿದರು.


ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ 50ನೇ ವರ್ಷವನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಸರ್ಕಾರದ ಪರವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈಗ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುತ್ತಿರುವವರು ಮುಗಿದು ಹೋಗಿರುವ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಅವರು ಕಿಡಿಕಾರಿದರು.


ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ಕೊಡುಗೆ ನೀಡದವರು ಈಗ ಸಂವಿಧಾನ ರಚನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ