LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಪುತ್ತಳಿ ನಿರ್ಮಾಣ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ- ಪ್ರೇಮ್ ಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್‌ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ ಗೊಂದಲಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ  ಮಾತನಾಡಿದ ಅವರು, ಜೂನ್ 27ರಂದು ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ನಡೆದ ಭೂಮಿಪೂಜೆ ಸಂಪೂರ್ಣ ಕಾನೂನುಬದ್ಧವಾಗಿಯೇ ನಡೆದಿದೆ ಎಂದು ತಿಳಿಸಿದರು.

 ಫೆಬ್ರವರಿ 5ರಂದು ನಡೆದ ಪಟ್ಟಣ ಪಂಚಾಯತಿಯ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಯೋಜನೆಯನ್ನು ಪಟ್ಟಣ ಪಂಚಾಯತಿ ಬಜೆಟ್‌ನಲ್ಲಿಯೂ ಸೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ತಾಂತ್ರಿಕ ಅನುಮೋದನೆ ಹಾಗೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮೂರು ತಿಂಗಳೊಳಗೆ ಕಾಮಗಾರಿ ಮುಗಿಸಲಾಗುವುದು ಎಂದು ಹೇಳಿದರು.

ಶಾಸಕ ಧೀರಜ್ ಮುನಿರಾಜು ದೊಡ್ಡಬಳ್ಳಾಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಶ್ರಮಿಸುತ್ತಿದ್ದು, ಅವರ ವಿರುದ್ಧ ಅನಗತ್ಯ ಅಪಪ್ರಚಾರ ನಡೆಸುವುದು ಸರಿಯಲ್ಲ ಎಂದು ಪ್ರೇಮ್ ಕುಮಾರ್ ಅಭಿಪ್ರಾಯಪಟ್ಟರು.

ಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಹೆಮ್ಮೆಯ ಸಂಸ್ಥೆಯಾಗಿದೆ. ಫೆಬ್ರವರಿಯಲ್ಲಿ ನಡೆದ ಮೊದಲ ಸಾಮಾನ್ಯ ಸಭೆಯಲ್ಲೇ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸದಸ್ಯರೆಲ್ಲರೂ ಒಪ್ಪಿಗೆ ಸೂಚಿಸಿದ್ದು, ಕಾಮಗಾರಿಗೆ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಲ್ಲರೂ ಅಭಿವೃದ್ದಿ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪಟ್ಟಮ ಪಂಚಾಯಿತಿಯ ಉಪಾಧ್ಯಕ್ಷೆ ಶ್ವೇತಾ ಮುರಳೀಧರ್,  ಸದಸ್ಯರಾದ ಕೃಷ್ಣಪ್ಪ, ಮುನಿಶಂಕ‌ರ್, ರಾಧಮಣಿ, ಅಂಬುಕಾಕ್ಷಿ, ನೇತ್ರ ಮಧುಕುಮಾ‌ರ್, ರಾಮಮೂರ್ತಿ ಮುಖಂಡರಾದ ಬಿ. ಆನಂದ್ ಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ