Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳು, ಗುಂಪುಗಾರಿಕೆ, ಭಿನ್ನಾಭಿಪ್ರಾಯವಿಲ್ಲ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳು, ಗುಂಪುಗಾರಿಕೆ, ಭಿನ್ನಾಭಿಪ್ರಾಯವಿಲ್ಲ. ಆದರೆ ಶಾಸಕರು ಮಂತ್ರಿಗಳು ಅವರ ವೈಯುತ್ತಿಕ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಶಾಸಕ, ಸಚಿವರುಗಳ ಹೇಳಿಕೆಗಳ ಕುರಿತು ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಗಮನ ನೀಡಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರು ಬದ್ದರಾಗಿರುತ್ತಾರೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದಲ್ಲಿದ್ದಂತೆ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಒಳ ಜಗಳಗಳಿಲ್ಲ. ಸಣ್ಣ-ಪುಟ್ಟ ಮನಸ್ತಾಪಗಳು ಅಧಿಕಾರದಲ್ಲಿದ್ದ ಎಲ್ಲಾ ಪಕ್ಷಗಳಲ್ಲಿಯೂ ಕಾಣಿಸುವುದು ಸಾಮಾನ್ಯವಾಗಿದೆ. ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ೨೦೨೩ರ ಚುನಾವಣೆಯಲ್ಲಿ ಪಕ್ಷ ೧೩೬ ಸೀಟುಗಳನ್ನು ಗೆಲುತ್ತದೆ ಎಂದು ಹೇಳಿದ್ದರು.

ಅದರಂತೆ ಚುನಾವಣೆಯಲ್ಲಿ ೧೩೬ ಸೀಟುಗಳನ್ನು ಗೆದ್ದಿದೆ. ಇದೆ ರೀತಿ ಉಪ ಚುನಾವಣೆಯಲ್ಲಿ ಸಮೀಕ್ಷೆಗಳು ಮಾಧ್ಯಮದವರು ಎಲ್ಲಾ ಪಕ್ಷಗಳು ಒಂದೂಂದು ಸೀಟು ಗೆಲ್ಲುತ್ತವೆ ಎಂದಿದ್ದರು. ಆದರೆ ಶಿವಕುಮಾರ್ ಮಾತ್ರ ನಮ್ಮ ಪಕ್ಷ ಮೂರು ಗೆಲ್ಲುತ್ತದೆ ಎಂದು ಹೇಳಿದ್ದರು. ಅದರಂತೆ ಉಪ ಚುನಾವಣೆಯಲ್ಲಿ ಮೂರು ಸ್ಥಾನವನ್ನು ಕಾಂಗ್ರೆಸ್ ಗೆದ್ದಿದೆ ಎಂದರು.

ಬೆಳೆ ವಿಮೆ ಯೋಜನೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಸೇರಿದೆ. ಕೃಷಿ ಇಲಾಖೆಯ ಅಧಿಕಾರಿಗಳು ವಿಮಾ ಕಂಪನಿಗಳ ಸಂಪರ್ಕದಲ್ಲಿದ್ದಾರೆ. ಈಗಾಗಲೇ ಹಲವಾರು ಕಡೆಯಲ್ಲಿ ವಿಮೆ ನೀಡಲಾಗಿದೆ ಇದರ ನಡುವೆ ಎಲ್ಲಿ ವಿಮೆ ಬಂದಿಲ್ಲ ಅಂತಹ ಕಡೆಗಳಲ್ಲಿ ವಿಮೆ ಕೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಪತನ ಆಗಲಿದೆ ಎಂಬ ಶೆಟ್ಟರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಶೆಟ್ಟರ್ ಅವರಿಗೆ ಅನುಭವ ಹಾಗಾಗಿ ಅವರು ಹೇಳಿಕೊಳ್ಳುತ್ತಾರೆ. ಸಿಎಂ, ಡಿಸಿಎಂ ಹಾಗೂ ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ಕೆಲವರು ವೈಯಕ್ತಿಕ ಹೇಳಿಕೆ ನೀಡಿದ್ದಾರೆ ಅಷ್ಟೆ. ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೂ ಬದ್ದರಾಗಿ ಇರುತ್ತೇವೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಏನೆಲ್ಲಾ ಆಯ್ತು ಅಂತ ನಿಮಗೂ ಗೊತ್ತಿದೆ. ಅದಕ್ಕೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಸರ್ಕಾರದಲ್ಲಿ ಶೇ.5 ರಷ್ಟು ಕೂಡ ಇಲ್ಲ. ಅಧಿಕಾರ ಇದ್ದಾಗ ಪಕ್ಷದಲ್ಲಿ ಒಳ ಜಗಳ ಸಾಮಾನ್ಯ ಎಂದು ತಿಳಿಸಿದರು.

ನನಗೆ ಯಾವ ಶಾಸಕರ ಬೆಂಬಲವೂ ಬೇಡ ಎಂದ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ ಇದ್ದಂತೆ. ೨೦೨೩ ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಡಿಕೆಶಿ ಯವರ ಕೊಡುಗೆ ಅವಿಸ್ಮರಣೀಯ. ಡಿಕೆ ಶಿವಕುಮಾರ್ ಅವರ ಶ್ರಮ ಕುರಿತು ಎಲ್ಲಾ ಶಾಸಕರ ತಲೆಯಲ್ಲಿದೆ.

ಸಿಎಂ, ಹೈಕಮಾಂಡ್‌ಗೂ ಇದು ಗೊತ್ತಿರುವ ವಿಚಾರ. ಅದು ಅವರ ಮಟ್ಟದಲ್ಲಿ ಚರ್ಚೆ ಆಗುವ ವಿಚಾರವಾಗಿದೆ. ಡಿಸಿಎಂ ಬಲಿಷ್ಠವಾಗಿದ್ದಾರೆ, ಸಿಎಂ ಸೇರಿದಂತೆ ಎಲ್ಲರೂ ಅವರ ಜೊತೆಗಿದೀವಿ. ಸುಭದ್ರವಾಗಿ ೫ ವರ್ಷ ನಾವು ಅಧಿಕಾರ ಕೊಡುತ್ತೇವೆ. ಡಿಸಿಎಂ ಹೇಳಿದ್ದಾರೆ ೨೦೨೮ ಕ್ಕೂ ನಮ್ಮದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಡಿಸಿಎಂ ೨೦೨೩, ಉಪ ಚುನಾವಣೆ ಎರಡಲ್ಲೂ ಪಕ್ಕಾ ಪ್ರೆಡಿಕ್ಟ್ ಮಾಡಿದ್ದರು. ಸರ್ಕಾರ ಸುಭದ್ರವಾಗಿದೆ ಯಾವುದೇ ಒಳ ಜಗಳ ಇಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಹಾಗಾಗಿ ಯಾರೂ ಅತಂಕಪಡುವ ಅವಶ್ಯಕತೆ ಇಲ್ಲ ಎಂದು ಸುಧಾಕರ್ ಹೇಳಿದರು.

ಸಿಎಂ, ಡಿಸಿಎಂ ಬಳಿ ನಕ್ಸಲರು ಹೋಗಿದ್ರೋ, ಅವರೇ ಇವರ ಬಳಿ ಬಂದಿದ್ರೋ...? ವಿಚಾರ ಬೇಡ. ಛಲವಾದಿ ನಾರಾಯಣಸ್ವಾಮಿ ಮೂಲತಃ ಕಾಂಗ್ರೆಸ್ ಪಕ್ಷದವರು. ಕೆಲ ಬೇಸರದಿಂದ ಬಿಜೆಪಿಗೆ ಹೋಗಿ ವಿಪಕ್ಷ ನಾಯಕರು ಆಗಿದ್ದಾರೆ. ಯಾರು ಶಾಂತಿ ಬಯಸುತ್ತಾರೆ ಅವರನ್ನು ಸರ್ಕಾರ ಸ್ವಾಗತ ಮಾಡುತ್ತದೆ. ರಾಜ್ಯದಲ್ಲಿ ಅಹಿಂಸಾತ್ಮಕ ಆಡಳಿತ ಇರಬೇಕು ಎಂಬುದೇ ನಮ್ಮ ಉದ್ದೇಶ. ಮುಖ್ಯವಾಹಿನಿಗೆ ನಕ್ಸಲರು ಬರುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಅದು ಆಗಿದೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸವೇ ವಿರೋಧ ಪಕ್ಷದವರದ್ದು. ರಾಜ್ಯದ ಬಡ ಜನರಿಗೆ ಅವರಿಂದ ಒಂದೂ ಉತ್ತಮ ಕಾರ್ಯಕ್ರಮ ಕೊಟ್ಟಿಲ್ಲ. ಅದಕ್ಕೆ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ವಾಣಿ ವಿಲಾಸ ಸಾಗರ ಜಲಾಶಯ ಭರ್ತಿಯಾಗಿ ಕೋಡಿ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ರಿಂದ ವಿ.ವಿ. ಸಾಗರಕ್ಕೆ ಬಾಗಿನ ಅರ್ಪಣೆಗೆ ಇದೇ ತಿಂಗಳು ೧೮ ರಂದು ಆಗಮಿಸುತ್ತಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಇವರ ಜೊತೆಗೆ ಸಚಿವ ಸಂಪುಟದ ಸಚಿವರುಗಳು ಭಾಗವಹಿಸಲಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ