Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಇಲ್ಲ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಕೀಯದಲ್ಲಿ ಟೀಕೆ
, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜಿಂದಾಲ್‌ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದ್ದಾರೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.

ಮೊದಲ ಬಾರಿಗೆ ಅರವಿಂದ ಬೆಲ್ಲದ್‌ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ. 

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.  
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ