Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ವರ್ಷಾಚರಣೆ ಯಾವುದೇ ಅಹಿತಕರ ಘಟನೆ ಇಲ್ಲ-ಸಚಿವ ಪರಮೇಶ್ವರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ 2025ರ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅವರು ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ವಿಪಕ್ಷ ನಾಯಕರಲ್ಲಿ ಗೃಹ ಸಚಿವರು ಮನವಿ ಮಾಡಿದ್ದಾರೆ. ಕಳೆದ ರಾತ್ರಿ ಲಕ್ಷಾಂತರ ಯುವಕರು, ನಾಗರಿಕರು ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಂಡು ಶಾಂತಿಯುತವಾಗಿ ಹೊಸ ವರ್ಷ ಆಗಮನ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದರು.

ಪೊಲೀಸ್ ಇಲಾಖೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿತ್ತು. ಯುವ ಜನತೆ ಮತ್ತು ಸಾರ್ವಜನಿಕರು ಕಾನೂನು ಪಾಲನೆ ಮಾಡಿದ್ದು ಇದಕ್ಕಾಗಿ ಅವರಿಗೆ ನನ್ನ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಕರ್ನಾಟಕವನ್ನು ಎಲ್ಲ ಸಮುದಾಯಗಳ ಶಾಂತಿಯ ತೋಟವಾಗಿ ರೂಪಿಸಿದ್ದೇವೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುವುದನ್ನು ಬಿಡಬೇಕು ಎಂದು ಕೋರುವುದಿಲ್ಲ. ಆದರೆ, ಜವಾಬ್ದಾರಿಯುತ ಮತ್ತು ರಚನಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸಬೇಕೆಂದು ಒತ್ತಾಯಿಸುತ್ತೇನೆ ಎಂದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ