Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯನವರು ಶಾಸಕರ ಸಭೆ ಮಾಡುವುದರಲ್ಲಿ ತಪ್ಪೇನಿದೆ?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯನವರು ತಮಗಿರುವ ಅಧಿಕಾರ ಬಳಸಿ ಶಾಸಕರ ಸಭೆ ಮಾಡುವುದರಲ್ಲಿ ತಪ್ಪೇನಿದೆ
? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತಮಾಡಿ, ನಿಮಗೆ ಆಹ್ವಾನ ನೀಡದೆ ಮುಖ್ಯಮಂತ್ರಿಗಳು ಶಾಸಕರ ಸಭೆ ಮಾಡುತ್ತಿದ್ದಾರಲ್ಲ ಎಂದು ಕೇಳಿದ ಪ್ರಶ್ನೆಗೆ, ಸುರ್ಜೆವಾಲಾ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ ಎಂದು ಡಿಸಿಎಂ ತಿಳಿಸಿದರು.
ಸಿಎಂ ಶಾಸಕರ ಸಭೆ ಮಾಡುವ ವಿಚಾರದಲ್ಲಿ ನನಗೇನೂ ಕಷ್ಟವಾಗದಿದ್ದರೂ ನಿಮಗೇಕೆ (ಮಾಧ್ಯಮಗಳು) ಕಷ್ಟ ಎಂದು ಪತ್ರಕರ್ತರನ್ನೇ ಡಿಸಿಎಂ ಮರು ಪ್ರಶ್ನಿಸಿದರು.


ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆ ನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ನಾನೂ ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿಗಳು ಉಪ ಮುಖ್ಯಮಂತ್ರಿಗಳನ್ನ ಕಡೆಗಣಿಸಿದ್ದಾರೆನ್ನುವ ಬಿಜೆಪಿ ಟೀಕೆ ಕುರಿತು ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಮೊದಲು ಅವರ ಮನೆ, ಅವರ ಪಕ್ಷ ಸರಿಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದೊಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ ಎಂದು ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರಿಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಬೇಸರ ವ್ಯಕ್ತಪಡಿಸಿ ಮಾತನಾಡಿರುವ ಕುರಿತು ಕೇಳಿದ ಪ್ರಶ್ನೆಗೆ, ಹಿರಿಯ ನಾಯಕರು ಅವರು, ಇದರಲ್ಲಿ ತಪ್ಪೇನಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ ತಪ್ಪೇನಿಲ್ಲ ಎಂದು ಡಿಸಿಎಂ ತಿಳಿಸಿದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎನ್ನುವ ಕೆಲವರ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ,ಅವರವರ ಅಭಿಪ್ರಾಯ ತಿಳಿಸುತ್ತಾರೆ, ಈ ಕುರಿತು ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಶಿವಕುಮಾರ್ ಮಾಧ್ಯಮದವರನ್ನ ಪ್ರಶ್ನಿಸಿದರು‌.

ಬಿಜೆಪಿ ಅವರು ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ ಎಂದು ತಿಳಿಸಿದರು.

ರಹಸಗೊಬ್ಬರ ಹಂಚುವುದರಲ್ಲಿ ನಾವು ತಾರತಮ್ಯ ಮಾಡಿದರೆ ಅವರು ಮಾತನಾಡಲಿ ನಮ್ಮ ಬಳಿ ಎಲ್ಲ ಲೆಕ್ಕ ಇದೆ. ಯಾವ ಯಾವ ಸೊಸೈಟಿಗಳಿಗೆ ಎಷ್ಟು ಹಂಚಲಾಗಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ದಾಸ್ತಾನಿದೆ ಎನ್ನುವ ಎಲ್ಲ ಲೆಕ್ಕ ಇದೆ. ಇದನ್ನು ಪರಿಶೀಲನೆ ನಡೆಸಲಿ. ನಾವುಗಳು ಯಾರೂ ರೈತರ ವಿರುದ್ಧ ಹೋಗಿಲ್ಲ, ಆ ಕೆಲಸ ಮಾಡುವುದೂ ಇಲ್ಲ ಎಂದು ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ