Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಸ್ತೂಲ್​​​​​​ ತೋರಿಸಿ ಚಿನ್ನಾಭರಣ, ನಗದು ಕದ್ದ ಕಳ್ಳರು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನಾಭರಣ ಅಂಗಡಿಗೆ ಚಿನ್ನ ಖರೀದಿ ನೆಪದಲ್ಲಿ ಬಂದು, ಪಿಸ್ತೂಲ್​​​​​​ ತೋರಿಸಿ 30 ಗ್ರಾಂ ಚಿನ್ನಾಭರಣ ಹಾಗೂ 50 ಸಾವಿರ ನಗದು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್​​​ ಠಾಣಾ ವ್ಯಾಪ್ತಿಯ ದಾಸನಪುರದ ರಾಮದೇವ್​​​​ ಜ್ಯುವೆಲ್ಲರಿ ಶಾಪ್​ನಲ್ಲಿ ನಡೆದಿದೆ. ಎರಡು ಬೈಕ್​ ಗಳಲ್ಲಿ ಮೂವರು ಆರೋಪಿಗಳು ಮಂಗಳವಾರ ಸಂಜೆ 5:30ರ ಸುಮಾರಿಗೆ ಬಂದಿದ್ದಾರೆ. ಮೊದಲು ಇಬ್ಬರು ಜ್ಯುವೆಲ್ಲರಿ ಶಾಪ್‌ನೊಳಗೆ ಪ್ರವೇಶಿಸಿದ್ದಾರೆ.


ಇನ್ನೋರ್ವ ಹೊರಗಿದ್ದ. ಶಾಪ್​ಗೆ ಬಂದವರು ಕಿವಿ ಓಲೆ ತೋರಿಸಿ, ಇಂಥದ್ದೇ ಡಿಸೈನ್​ ಬೇಕು ಎಂದೆಲ್ಲಾ ಹೇಳಿದ್ದಾರೆ. ಜ್ಯುವೆಲ್ಲರಿ ಶಾಪ್​ ಮಾಲೀಕರ ಮಕ್ಕಳಾದ ವಿಷ್ಣು ಮತ್ತು ಗೌತಮ್ ಅಂಥ ಡಿಸೈನ್ ನಮ್ಮ ಬಳಿ ಇಲ್ಲ ಎಂದಿದ್ದಾರೆ. ಈ ವೇಳೆ ಒಬ್ಬ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ತಕ್ಷಣ ಹೊರಗಿದ್ದ ಆರೋಪಿ ಬಂದು ಚಿನ್ನಾಭರಣ ಮತ್ತು ನಗದು ಹಣವನ್ನು ಬ್ಯಾಗ್​ನಲ್ಲಿ ತುಂಬಿಸಿಕೊಂಡಿದ್ದಾರೆ.

ಇದರಿಂದ ಆತಂಕಗೊಂಡು ಮಕ್ಕಳು ಕಿರುಚಿಕೊಂಡಿದ್ದಾರೆ. ಓರ್ವ ಆರೋಪಿ ಬಾಲಕನ ಮುಖ, ಕೈಗೆ ಹೊಡೆದು ಹಲ್ಲೆ ಮಾಡಿದ್ದಾನೆ. ಮಹಿಳೆಯರ ಗುಂಪು ಶಾಪ್​ನತ್ತ ಬರುವುದನ್ನು ಗಮನಿಸಿದ ಆರೋಪಿಗಳು ಬೈಕ್​ನಲ್ಲಿ ಪರಾರಿಯಾಗಿದ್ದಾರೆ.


ಮಾಲೀಕರಾದ ಮಾಣಿಕ್ ರಾಮ್ ಅವರು ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಉತ್ತರ ಪಶ್ಚಿಮ ವಿಭಾಗದ ಡಿಸಿಪಿ ಡಿ.ಎಲ್.ನಾಗೇಶ್ ಪ್ರತಿಕ್ರಿಯಿಸಿ​​
, ಆರೋಪಿಗಳು ಬಳಸಿರುವ ಪಿಸ್ತೂಲ್​ ನಿಜವಾದುದೋ ಅಥವಾ ನಕಲಿಯೋ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದ್ದು ಆದರ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ