Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಗೆ ಚಿಂತನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ‌ಬಳಿ ಮಾತನಾಡಿದರು. ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ ಎಂದು ಹೇಳಿದರು.

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಬಗ್ಗೆ ಮಾತನಾಡಿ, ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡಬ್ಲ್ಯೂಎಸ್​ಎಸ್​ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು ಹಾಗೂ ಸ್ನಾನ‌ಮಾಡಲು ಅಲ್ಲ ಎಂದು ತಿಳಿಸಿದರು.

ವಿಬಿ ಗ್ರಾಮ್ ಜಿ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವೋ ಆಂದೋಲನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿದ್ದ ಗೃಹ ಸಚಿವ ಜಿ.ಪರಮೇಶ್ವರ್​​, ಶಾಲಾ - ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ.

ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದಾರೆ. ಇದರ ಸಾಧಕ-ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ