Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ್ಯಸಿಡ್​​ ಎರಚುವುದಾಗಿ ಪೌರಾಯುಕ್ತೆಗೆ ಬೆದರಿಕೆ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದು ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ.


ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್​​ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಬೆದರಿಕೆ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಮುಖಂಡರ ಆಕ್ರೋಶ:
ಪೌರಾಯುಕ್ತೆಗೆ ಮನಬಂದಂತೆ ನಿಂದಿಸಿ, ಬೆದರಿಕೆ ಹಾಕಿರುವ ರಾಜೀವ್​​ ಗೌಡನನ್ನು ಪೊಲೀಸರು ಇನ್ನೂ ಬಂಧಿಸದ ಬಗ್ಗೆ ಸ್ವಪಕ್ಷ ಕಾಂಗ್ರೆಸ್​​ನಲ್ಲಿಯೇ ಆಕ್ರೋಶ ಭುಗಿಲೆದ್ದಿದೆ.
ಶಿಡ್ಲಘಟ್ಟದಲ್ಲಿ ಆತ ನಡೆದುಕೊಂಡಿರುವ ರೀತಿಯಿಂದ ಕಾಂಗ್ರೆಸ್​​ ಪಕ್ಷಕ್ಕೆ ನಷ್ಟವಾಗ್ತಿದ್ದು
, ಪೊಲೀಸರು ಶೀಘ್ರ ಸೂಕ್ತಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.


ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ರಾಜೀವ್ ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಇಂದು ಮತ್ತೆ ನಡೆಯಲಿದೆ.


ನಿರೀಕ್ಷಣಾ ಜಾಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ಕೋರ್ಟ್‌, ವಿಚಾರಣೆಯನ್ನ ಜನವರಿ 22ಕ್ಕೆ ಅಂದರೆ ಇಂದಿಗೆ ಮುಂದೂಡಿತ್ತು.

ಅಮಾನತಿಗೆ ಶಿಫಾರಸು:
ಪಕ್ಷದ ಮುಖಂಡ ರಾಜೀವ್​ಗೌಡನ ವರ್ತನೆ ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರ ತಂದ ಹಿನ್ನೆಲೆ, ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಆದರೆ ನಾಪತ್ತೆಯಾಗಿರುವ ರಾಜೀವ್​​ ಗೌಡ ನೋಟೀಸ್ ಗೆ ಉತ್ತರಿಸದ ಕಾರಣ ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷರಿಗೆ ಶಿಫಾರಸು ಮಾಡಿರುವ ಘಟನೆ ನಡೆದಿದೆ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ