Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ಗುಂಡಿಯಲ್ಲಿ ಮೂವರ ಮೃತದೇಹ ಪತ್ತೆ

Advertisement
ಚಂದ್ರವಳ್ಳಿ ನ್ಯೂಸ್, ಕಟ್ಟೂರು:
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣ ಕೊನೆಗೂ ಶನಿವಾರ ಮಧ್ಯಾಹ್ನದ ವೇಳೆಗೆ ಬಯಲಾಗಿದೆ. ಆರೋಪಿ ತನ್ನ ಮನೆಯಲ್ಲೇ ತೋಡಿದ ಒಂದೇ ಗುಂಡಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.


ಮನೆಯಲ್ಲಿ ನಾಲ್ಕಡಿ ಆಳದ ಗುಂಡಿ ತೋಡಿದ ಆರೋಪಿ ಅಕ್ಷಯ್ ಕುಮಾ‌ರ್, ಮೊದಲಿಗೆ ತಾಯಿಯ ಮೃತದೇಹ, ಅದರ ಮೇಲೆ ತಂಗಿಯ ಮೃತದೇಹ ಹಾಗೂ ಕೊನೆಯಲ್ಲಿ ತಂದೆಯ ಮೃತದೇಹವನ್ನು ಹಾಕಿ ಟೈಲ್ಸ್‌ನಿಂದ ಮುಚ್ಚಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.


 ಭೀಮ್‌ರಾಜ್, ಜಯಲಕ್ಷ್ಮಿ ಹಾಗೂ ಸಹೋದರಿ ಅಮೃತಾ ಕೊಲೆಯಾದವರು. ಆರೋಪಿತನನ್ನು ಶನಿವಾರ ಬೆಂಗಳೂರಿನಿಂದ ಕರೆದುಕೊಂಡು ಬಂದ ನಂತರ ಉಪವಿಭಾಗಾಧಿಕಾರಿ ಸಮಕ್ಷಮದಲ್ಲಿ ಮಹಜರು ಮಾಡಿದ ನಂತರ ಮನೆಯೊಳಗೆ ಹೂತಿಟ್ಟ ಮೂರು ಶವಗಳು ದೊರೆತಿವೆ.


ಬಳಿಕ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯ ನಡೆಯಿತು. ಘಟನಾ ಸ್ಥಳ ಹಾಗೂ ಆಸ್ಪತ್ರೆ ಆವರಣದಲ್ಲಿ ಸೇರಿರುವ ಅಪಾರ ಸಂಖ್ಯೆಯ ಜನಸ್ತೋಮ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.


ಎಸ್​ಪಿ ಪ್ರತಿಕ್ರಿಯೆ:
ಬೆಂಗಳೂರಿನ ತಿಲಕ್ ನಗರದ ಪೊಲೀಸ್ ಠಾಣೆಯಲ್ಲಿ ತಂದೆ - ತಾಯಿ
, ಸಹೋದರಿ ಜಯದೇವ ಆಸ್ಪತ್ರೆಗೆ ಹೋದವರು ವಾಪಸ್ ಬಂದಿಲ್ಲ ಎಂದು ಆರೋಪಿ ಅಕ್ಷಯ್ ನಾಪತ್ತೆ ದೂರು ದಾಖಲಿಸಿದ್ದರು. ಇದರಂತೆ ಬಳಿಕ ತಿಲಕ್ ನಗರ ಪೊಲೀಸ್ ಅಧಿಕಾರಿಗಳು, ಆರೋಪಿ ಅಕ್ಷಯ​ನನ್ನು ವಿಚಾರಣೆ ಮಾಡಿದಾಗ, ಆರೋಪಿ ದ್ವಂದ್ವ ಹೇಳಿಕೆ ನೀಡಿದ್ದ. ಬಳಿಕ ಪೊಲೀಸರು ಅನುಮಾನಗೊಂಡು ವಿಚಾರಣೆ ಮಾಡಿದಾಗ ಸಿಕ್ಕ ಮಾಹಿತಿ ಮೇರೆಗೆ ತಿಲಕ್ ನಗರ ಪೊಲೀಸರು ಶುಕ್ರವಾರ ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್​ಪಿ ಜಾಹ್ನವಿ ತಿಳಿಸಿದ್ದಾರೆ.



ತಿಲಕ್ ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ಮಾಡಿದ್ದಾರೆ. ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಮೂರು ಮೃತ ದೇಹಗಳನ್ನು ಹೊರೆತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.


ಕೊಲೆಗೆ ಕಾರಣ ಮತ್ತು ಬಳಸಿದ ಆಯುಧದ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಮಾಹಿತಿ ಗೊತ್ತಾಗಲಿದೆ. ತಿಲಕ್ ನಗರ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಂಡ ಬಳಿಕ ನಮಗೆ ಹಸ್ತಾಂತರಿಸಿದ ನಂತರ ನಾವು ತನಿಖೆ ಮಾಡುತ್ತೇವೆ ಎಂದರು.


ಕೊಲೆ ಪ್ರಕರಣ ಸಂಬಂಧ ದಾಖಲಾದ ಎಫ್​ಐಆರ್​ ನಲ್ಲಿ ಇಬ್ಬರನ್ನು ಆರೋಪಿಗಳನ್ನಾಗಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಎಸ್​​ಪಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ