Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗಡಿಗೆ ನುಗ್ಗಿದ ಲಾರಿ, ಸ್ಥಳದಲ್ಲೇ ಮೂರು ಮಂದಿ ಸಾವು

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಅಂಗಡಿ ಬೇಕರಿಗೆ ನುಗ್ಗಿದ ಪರಿಣಾಮ ಅಂಗಡಿ ಬಳಿ ಇದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ರಂಗಶಾಮಯ್ಯ ಮತ್ತು ಬೈಲಪ್ಪ ಎಂದು ಗುರುತಿಸಲಾಗಿದೆ. ಕೋಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಗಡಿಗೆ ನುಗ್ಗಿದ ಲಾರಿ ಸಂಪೂರ್ಣ ಹಳೆಯದಾಗಿದ್ದು, ಚಾಲಕನ ಬೇಜವಾಬ್ದಾರಿತನವೇ ಇದಕ್ಕೆ ಕಾರಣ. ಅಲ್ಲದೇ ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಬಾರದೇ ಇರುವುದು ಕೂಡ ವ್ಯವಸ್ಥೆಯ ನಿರ್ಲಕ್ಷ್ಯ ಎಂದು ಗ್ರಾಮಸ್ಥ ಶ್ರೀಧರ್ ಗಂಭೀರ ಆರೋಪ ಮಾಡಿದರು.

ಗ್ರಾಮದ ರಸ್ತೆಗಳಲ್ಲಿ ಹಂಪ್​​ಗಳನ್ನು ಹಾಕದೇ ಇರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್, ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದು:ಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ