Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆ ಅಧ್ಯಕ್ಷ ಸೇರಿ 3 ಮಂದಿ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು
, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


 ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ. ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


"ದಯೆಯೇ ಧರ್ಮದ ಮೂಲವಯ್ಯ" ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ.

ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ.


ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ