Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಪಂ, ತಾಪಂ ಚುನಾವಣೆಯಲ್ಲಿ ಬೂತ್ ಮಟ್ಟದಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಟಿಕೆಟ್-ಡಿಕೆಶಿ

Advertisement
ಗ್ರಾಮ ಪಂಚಾಯಿತಿಗಳಲ್ಲಿ ಗ್ಯಾರಂಟಿ ಸಮಾವೇಶ-ಡಿಸಿಎಂ ಡಿಕೆ ಶಿವಕುಮಾರ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಐಕ್ಯತೆ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಸಮರ್ಪಿತವಾದ ಈ ಮಹಾನ್ ಸಂಘಟನೆಯ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ನವ ಭಾರತದ ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷದ ಹೋರಾಟ ನಿತ್ಯ ನಿರಂತರ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.


 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತಾಡಿದರು.


ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳನ್ನು ಯಾವ ಸರ್ಕಾರದಿಂದಲೂ ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಇದನ್ನೇ ಬಿಜೆಪಿ ದೇಶದ ಹಲವು ರಾಜ್ಯಗಳಲ್ಲಿ ಜಾರಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಗ್ಯಾರಂಟಿ ಯೋಜನೆಯ ಯಶಸ್ಸನ್ನು ಆಧಾರವಾಗಿಟ್ಟುಕೊಂಡು ಪ್ರತಿ ಪಂಚಾಯ್ತಿಗಳಲ್ಲಿ ಗ್ಯಾರಂಟಿ ಸಂಭ್ರಮ, ಸಮಾವೇಶಗಳನ್ನು ಆಚರಿಸುವಂತೆ ಅವರು ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ ನೀಡಿದರು.
ಮುಂದೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗಳು ಬರುತ್ತಿವೆ. ಈ ಚುನಾವಣೆಯಲ್ಲಿ ಬೂತ್ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಟಿಕೆಟ್ ನೀಡಲಾಗುವುದು. ನಾಯಕರ ಹಿಂದೆ-ಮುಂದೆ ಓಡಾಡುವವರಿಗೆ ಟಿಕೆಟ್ ಇಲ್ಲ ಎಂದು ಅವರು ಹೇಳಿದರು.


ಜಿಪಂ, ತಾಪಂ ಚುನಾವಣೆಗಳಿಗೆ ಸ್ಪರ್ಧಿಸುವಂತ ಕಾರ್ಯಕರ್ತರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆ ಮಾಡಲು ಇಂದಿನಿಂದಲೇ ಆರಂಭವಾಗಿದೆ. ಸಾಮಾನ್ಯ ವರ್ಗದವರು ಅರ್ಜಿ ಜತೆ 50 ಸಾವಿರ, ಪರಿಶಿಷ್ಟ ಪಂಗಡದವರು ಅರ್ಜಿ ಜತೆ 25 ಸಾವಿರ ರೂ.ಗಳನ್ನು ಡಿಡಿ ರೂಪದಲ್ಲಿ ಸಲ್ಲಿಸಬೇಕು. ಇದು ಕಾಂಗ್ರೆಸ್ ಪಕ್ಷದ ಕಟ್ಟಡದ ನಿಧಿಗಾಗಿ ನಾವು ಟಿಕೆಟ್ ಆಕಾಂಕ್ಷಿಗಳಿಂದ ಪಡೆಯುತ್ತಿರುವ ಹಣ ಎಂದು ಡಿ.ಕೆ ಶಿವಕುಮಾರ್ ಹೇಳಿದರು.


ಕೆಲ ಮಹಿಳಾ ಕಾರ್ಯಕರ್ತರು ಮಹಿಳೆಯರು ಟಿಕೆಟ್‌ಗೆ ಅರ್ಜಿ ಸಲ್ಲಿಸುವ ಹಣವನ್ನು ಕಡಿಮೆ ಮಾಡಿ ಎಂದಾಗ, ಹಣ ಕಡಿಮೆ ಮಾಡಲಾಗುವುದಿಲ್ಲ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಚುನಾವಣೆಗೆ ಎಷ್ಟು ಹಣ ಖರ್ಚಾಗುತ್ತದೆ ಎಂಬುದು ನನಗೆ ಗೊತ್ತಿದೆ. ಶೇ.50 ರಷ್ಟು ಮಹಿಳಾ ಮೀಸಲಾತಿ ಇದೆ.

ಮಹಿಳೆಯರೇ ಆಗಲೀ, ಯಾರೇ ಆಗಲೀ 50 ಸಾವಿರ ಎಂದಾಗ, ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳೆಯರಿಗೆ ೨೫ ಸಾವಿರ ರೂ. ನಿಗದಿ ಮಾಡುವಂತೆ ಸೂಚಿಸಿದಾಗ ಅದಕ್ಕೆ ಒಪ್ಪಿಗೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳ ಸೂಚನೆಯಂತೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಟಿಕೆಟ್‌ಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ 25 ಸಾವಿರ ರೂ. ನಿಗದಿ ಮಾಡಿರುವುದಾಗಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.

ನರೇಗಾ ಯೋಜನೆಯಿಂದ ಮಹಾತ್ಮಗಾಂಧಿ ಹೆಸರನ್ನು ಕೈ ಬಿಟ್ಟಿರುವುದರ ವಿರುದ್ಧ ಜನವರಿ-5 ರಿಂದ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಾಗುವುದು. ಕಾರ್ಯಕರ್ತರು ಈ ಹೋರಾಟದಲ್ಲಿ ಭಾಗವಹಿಸುವಂತೆ ಡಿ.ಕೆ. ಶಿವಕುಮಾರ್ ಕರೆ ನೀಡಿದರು.


ಈ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ಸಂಸದ ಡಾ. ಜಿ.ಸಿ. ಚಂದ್ರಶೇಖರ್, ಎಐಸಿಸಿ ಜಂಟಿ ಕಾರ್ಯದರ್ಶಿ ಡಾ. ಪಾಲಕ್ ವರ್ಮ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ರಾಜ್ಯಸಭೆ ಮಾಜಿ ಸದಸ್ಯ ರಾಜೀವ್‌ಗೌಡ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗಡೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ