Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ
, ಭರಮಸಾಗರ ಹಾಗೂ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನಾವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು 05-08-2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.

ಸದರಿ ಆಯ್ಕೆ ಪಟ್ಟಿಗಳಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ, ಚಿತ್ರದುರ್ಗಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ಹತ್ತಿರದ ಬಾಲ ಭವನ ಆವರಣದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ, ಭರಮಸಾಗರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆಯ ಹತ್ತಿರ ಇರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಹೊಸದುರ್ಗಕ್ಕೆ ಸಂಬಂಧಿಸಿದಂತೆ ಹೊಸದರ್ಗು ಪಟ್ಟಣದ ಟಿ.ಬಿ.ವೃತ್ತದಲ್ಲಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದ ಕಟ್ಟಡದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ