Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಅದ್ಧೂರಿ ಜಂಬೂ ಸವಾರಿ

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸುವ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.


ರಾಜ್ಯ, ಹೊರ ರಾಜ್ಯ ಹಾಗೂ ದೇಶ ವಿದೇಶಗಳಿಂದಲೂ ಜನರು ಜಂಬೂಸವಾರಿ ವೀಕ್ಷಣೆಗಾಗಿ ಆಗಮಿಸುತ್ತಿದ್ದಾರೆ.
ಅಕ್ಟೋಬರ್-2ರ ಗುರುವಾರ ದಸರಾ ಗಜಪಡೆಯ ನಾಯಕ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗುವ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು, ಸಾರ್ವಜನಿಕರು ಕಾತರದಿಂದ ಕಾಯುತ್ತಿದ್ದಾರೆ.


ಈ ಬಾರಿಯ ನಾಡಹಬ್ಬ ದಸರಾವು 11 ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮುಕ್ತಾಯದ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಗತ್​ಪ್ರಸಿದ್ದ ಜಂಬೂ ಸವಾರಿಗೆ ಗುರುವಾರ ಚಾಲನೆ ನೀಡಲಿದ್ದಾರೆ.


ಬಳಿಕ ಅಭಿಮನ್ಯು ಆನೆಯು ಅರಮನೆ ಬಳಿಯಿಂದ ಚಿನ್ನದ ಅಂಬಾರಿ ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ. ದೂರ ಸಾಗಲಿದೆ. ಜಂಬೂ ಸವಾರಿಯಲ್ಲಿ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡುವ ಮೂಲಕ ಮೆರವಣಿಗೆಗೆ ಮತ್ತಷ್ಟು ಮೆರುಗು ಸಿಗಲಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ