Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಹರಿವಾಯು ಗುರು ಸೇವಾ ಟ್ರಸ್ಟ್‌ ವತಿಯಿಂದ ಹರಿದಾಸ ಹಬ್ಬ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕನಕ
, ಪುರಂದರಾದಿ ಹರಿದಾಸರುಗಳ ಸ್ಮರಣೀಯ ೨೫ ನೇ ವರ್ಷದ ಹರಿದಾಸ ಹಬ್ಬ ಹರಿವಾಯು ಗುರು ಸೇವಾ ಟ್ರಸ್ಟ್‌ನಿಂದ ಜ.೪ ರಿಂದ ೧೧ ರವರೆಗೆ ಎಂಟು ದಿನಗಳ ಕಾಲ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.

ರಜತ ಮಹೋತ್ಸವದ ಅಂಗವಾಗಿ ನಡೆಯುವ ಹರಿದಾಸ ಹಬ್ಬ-ಬೆಳ್ಳಿ ಹಬ್ಬವನ್ನು ಭಾನುವಾರ ಸಂಜೆ ೬-೩೦ ಕ್ಕೆ ಉಡುಪಿ ಪೇಜಾವರ ಮಠದ ಪೀಠಾಧಿಪತಿಗಳಾದ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಉದ್ಘಾಟಿಸುವರು.

ಪಂಡಿತ ಪ್ರಹ್ಲಾದಾಚಾರ್ಯ ತುಪ್ಪಸಕ್ರಿ ಪ್ರವಚನ ನೀಡಲಿದ್ದಾರೆ. ಪಂ.ಡಾ.ಸತ್ಯಧ್ಯಾನಾಚಾರ್ಯಕಟ್ಟಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ರಾಘವೇಂದ್ರಸ್ವಾಮಿಗಳ ಮಠದ ವ್ಯವಸ್ಥಾಪಕ ಪ್ರಾಣೇಶಾಚಾರ್ಯ ಕೊಪ್ಪರ, ಚಿತ್ರದುರ್ಗ ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ನಗರಸಭೆ ಸದಸ್ಯ ಜಿ.ಹರೀಶ್, ಗುರುರಾಜ ಸೇವಾ ಸಂಘದ ಅಧ್ಯಕ್ಷ ವೇದವ್ಯಾಸಚಾರ್ಯ(ಅಣ್ಣಾದೊರೆ) ಬಡಗನಾಡು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎ.ಶೇಷಗಿರಿರಾವ್, ವೈಷ್ಣವಸಭಾ ಅಧ್ಯಕ್ಷ ಜಗದೀಶ್ ಜೆ.ಅಯ್ಯಂಗಾರ್, ಬ್ರಹ್ಮಚೈತನ್ಯ ಭಕ್ತಮಂಡಳಿ ಅಧ್ಯಕ್ಷ ಕಟೀಲ್ ದಿವಾಕರ್, ಹಿರಿಯೂರು ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಸ್ವಾಮಿನಾಥ್, ಚಳ್ಳಕೆರೆ ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಡಾ.ಅನಂತರಾಮ್ ಗೌತಮ್

ಚಿತ್ರದುರ್ಗ ಉತ್ತರಾದಿ ಮಠದ ವ್ಯವಸ್ಥಾಪಕ ಪ್ರಭಂಜನಾಚಾರ್ಯ ಕೂಸನೂರು, ಮೊಳಕಾಲ್ಮುರು ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎಸ್.ಎನ್.ಲಕ್ಷ್ಮಿಪತಿ, ಹೊಸದುರ್ಗ ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಬಿ.ಚಂದ್ರಪ್ರಕಾಶ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸ್‌ಬಾಬು, ಆರ್ಯವೈಶ್ಯ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಎಲ್.ಆರ್.ವೆಂಕಟೇಶ್‌ಬಾಬು, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ಮಾಜಿ ಅಧ್ಯಕ್ಷ ಪಿ.ಎಲ್.ಸುರೇಶ್‌ರಾಜು, ತಾಮ್ರ ವಿದ್ಯಾಲಯ ಕಾರ್ಯದರ್ಶಿ ರಾಮಲಿಂಗಶ್ರೇಷ್ಠಿ ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪ್ರತಿನಿತ್ಯ ಸಂಜೆ ೭-೩೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ದಾಸವಾಣಿ, ಭರತನಾಟ್ಯ, ಪ್ರವಚನ, ದಾಸಲಹರಿ, ದಾಸಸುರಭಿ, ದಾಸಾಂಜಲಿ, ಜ.೧೦ ರಂದು ಸಂಜೆ ಭವ್ಯ ಶೋಭಾಯಾತ್ರೆ ರಾಜಬೀದಿಗಳಲ್ಲಿ ಸಾಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಜೋಯಿಸ್ ಹುಲಿರಾಜ್ ವಿನಂತಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ