Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿಕಲಚೇತನರ ದಿನಾಚರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘ ಜಿಲ್ಲಾ ಘಟಕ, ಗ್ರಾಮೀಣ, ನಗರ,

ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ  ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಇದೇ ಡಿಸೆಂಬರ್ 03ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮದಕರಿ ವೃತ್ತ ಬಳಿಯ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  


ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಗೌರವ ಉಪಸ್ಥಿತಿವಹಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ,

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ