Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು-ರುದ್ರಣ್ಣ ಹರ್ತಿಕೋಟೆ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕು ಜೆಟ್ ಸಿಬಿಎಸ್‌ಸಿ ಶಾಲೆಯಲ್ಲಿ ಶನಿವಾರ ನಡೆದ ನಾಯಕತ್ವ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿ ಕೋಟೆಯವರು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಶುಭ ಹಾರೈಸಿದರು.


ಹಿರಿಯೂರು ತಾಲೂಕು, ಗೊಲ್ಲಹಳ್ಳಿಯ ಜಟ್ ಸಿಬಿಸಿ ಶಾಲೆಯಲ್ಲಿ ನಡೆದ ನಾಯಕತ್ವ ಪ್ರತಿಜ್ಞಾ ಕಾರ್ಯಕ್ರಮದಲ್ಲಿ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಮಕ್ಕಳಿಗೆ ಶಾಲೆಯ ಧ್ವಜ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

 ಜಾಗೃತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಬೆಳಗೆರೆ, ಕಾರ್ಯದರ್ಶಿ ಗಿರಿಜಾ ಮತ್ತು ಶಾಲೆಯ ಪ್ರಾಮುಖ್ಯಪಾಲ ಷಣ್ಮುಖ ಸುಂದರಂ ಈ ಸಂದರ್ಭದಲ್ಲಿ ಇದ್ದರು.

  ಗ್ರಾಮೀಣ ಮಕ್ಕಳು ಆಧುನಿಕ ಜ್ಞಾನವನ್ನು ಗಳಿಸಿಕೊಳ್ಳುವ ಜೊತೆಗೆ ರೂಢಿಗತವಾಗಿ ಬಂದ ಜಾನಪದ ಕಲೆಗಳನ್ನು ಕಲಿಯಬೇಕೆಂದು ಕರ್ನಾಟಕ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಕರೆ ನೀಡಿದ್ದಾರೆ.


ಅವರು ಶನಿವಾರ ಗೊಲ್ಲಹಳ್ಳಿಯ ಜೆಟ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರಿಗೆ ಅಧಿಕಾರ ಸ್ವೀಕಾರ ಮಾಡಿ ಮಾತನಾಡುತ್ತಿದ್ದರು. ನಮ್ಮ ಕಾಲದಲ್ಲಿ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ಣುಡಿ ಇತ್ತು ಆದರೆ ಬದಲಾಗುತ್ತಿರುವ ಈ ಕಾಲದಲ್ಲಿ ಇಂದಿನ ಮಕ್ಕಳೇ ಈಗಿನ ಪ್ರಜೆಗಳು ಎಂಬುವಷ್ಟು ಬದಲಾಗಿದೆ.


ಮಕ್ಕಳ ಕಲಿಕೆಯ ಗುಣಮಟ್ಟವೂ ಕೂಡ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಇದಕ್ಕೆ ತಕ್ಕಂತೆ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಜೆಟ್ ಸಿ.ಬಿ.ಎಸ್.ಇ ಶಾಲೆ ಗ್ರಾಮೀಣ ಬದುಕನ್ನೂ ಸಹ ಮಕ್ಕಳು ಮರೆಯದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.


ರುದ್ರಣ್ಣ ಹರ್ತಿಕೋಟೆಯವರು ತಮ್ಮ ಬಾಲ್ಯದ ಬದುಕನ್ನು ಸ್ಮರಿಸುವ ಮೂಲಕ ಮಕ್ಕಳಿಗೆ ಸ್ಪೂರ್ತಿಯ ಮಾತನ್ನು ಹೇಳಿದರು .
ಜಾಗೃತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಬೆಳೆಗೆರೆ ಮಾತನಾಡಿ ಗ್ರಾಮೀಣ ಮಕ್ಕಳು ಆಧುನಿಕ ಶಿಕ್ಷಣವನ್ನು ಸಮರ್ಥವಾಗಿ ಕಲಿತರೆ ಜಾಗತಿಕ ಮಟ್ಟದಲ್ಲಿ ಕನ್ನಡ ಭಾಷೆ ಮತ್ತು ಬದಕನ್ನು ಮತ್ತಷ್ಟು ಸಮರ್ಥವಾಗಿ ರೂಪಿಸಿಕೊಳ್ಳಬಹುದುದೆಂದು  ಅಭಿಪ್ರಾಯ ಪಟ್ಟರು.


ಪ್ರಾಂಶುಪಾಲ ಸುಂದರಂ ರವರು ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಉಪಪ್ರಾಂಶುಪಾಲ ಧನುಷ್ ಅವರು ರುದ್ರಣ್ಣ ಹರ್ತಿಕೋಟೆಯವರ ಸಾಧನೆಯ ಬದುಕನ್ನು ಪರಿಚಯ ಮಾಡಿಕೊಟ್ಟರು.
ಗಣಿತ ಶಿಕ್ಷಕ ಶಿವು ನರ್ವಾರ್ ಸ್ವಾಗತಿಸಿದರು. ಸುಧಾ ವಂದಿಸಿದರು. ಶಾಲಾ ಕ್ಯಾಪ್ಟನ್ ಕುಮಾರಿ ಪ್ರೇಕ್ಷಾ ಹಾಗೂ ಉಳಿದ ತಂಡದ ನಾಯಕರು ಸಭೆಯಲ್ಲಿ ಮಾತಾಡಿದರು.


 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ