Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಪ್ರವಾಸಿಗರು ಸುರಕ್ಷಿತ-ಡಾ. ಪ್ರಭಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದ ಕರ್ನಾಟಕದ ಎಂಟು ಮಂದಿ ಭಾರತೀಯ ಪ್ರವಾಸಿಗರು ಹಳೆಯ ದೋಹಾ ಬಂದರಿನಲ್ಲಿ ಹಾಗೂ ಬಹರೈನ್ ರಾಜ್ಯದ ಉಮ್ ಅಲ್ ಹಸ್ಸಾಮ್ ಪ್ರದೇಶದಲ್ಲಿ ನಾಲ್ವರು ಭಾರತೀಯರು ಸಿಲುಕಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್  ಮನವಿ ಮಾಡಿದ್ದಾರೆ. 

ಅವರೆಲ್ಲರೂ ಸುರಕ್ಷಿತವಾಗಿ ಆಗಮಿಸಲು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಕ್ಷಣ ಮಧ್ಯಪ್ರವೇಶ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವರಾದ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.

ಸಂಬಂಧಿತ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಿ, ಪ್ರವಾಸಿಗರನ್ನು ಶೀಘ್ರದಲ್ಲಿ ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ.

ಈಗಾಗಲೇ ದುಬೈಗೆ ತೆರಳಿದ್ದ ಸುಮಾರು 50 ಪ್ರಯಾಣಿಕರು ಸುರಕ್ಷಿತವಾಗಿ ಹಿಂದಿರುಗಿದ್ದಾರೆ. ಬಳ್ಳಾರಿ, ಚಿತ್ರದುರ್ಗ ಹಾಗೂ ನಮ್ಮ ದಾವಣಗೆರೆ ಕ್ಷೇತ್ರದ ಜಗಳೂರು ತಾಲ್ಲೂಕಿನ 15 ಜನರು ಸುರಕ್ಷಿತವಾಗಿ ಬಂದಿದ್ದಾರೆ. ಅದಕ್ಕೂ ಮುನ್ನ ಆಫ್ರಿಕಾ ಖಂಡದ ಚಾಡ್ ದೇಶದಲ್ಲಿ ವೀಸಾ ಸಮಸ್ಯೆಯಿಂದ ತೊಂದರೆಯಲ್ಲಿದ್ದ ಎಂಟು ಮಂದಿ ಹಕ್ಕಿಪಿಕ್ಕಿ ಜನಾಂಗದವರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಕೇಂದ್ರ ವಿದೇಶಾಂಗ ಸಚಿವರಾದ ಡಾ.ಎಸ್ ಜೈಶಂಕರ್ ಅವರು ಹಾಗೂ ರಾಯಭಾರಿ ಕಚೇರಿ ನೀಡಿದ ಸಹಕಾರಕ್ಕೆ ಧನ್ಯವಾದಗಳನ್ನು ಅವರು ಅರ್ಪಿಸಿದ್ದಾರೆ.

ಇದೀಗ ಪ್ರವಾಸಕ್ಕೆ ತೆರಳಿರುವ ಕರ್ನಾಟಕದ ಎಲ್ಲಾ ನಾಗರೀಕರು ಸುರಕ್ಷಿತವಾಗಿ ಹಿಂದಿರುಗಲು ಅಗತ್ಯವಾದ ಎಲ್ಲಾ ಬೆಂಬಲ ನೀಡಲಾಗುತ್ತಿದೆ. ಆದ್ದರಿಂದ  ಕುಟುಂಬದ ಸದಸ್ಯರು ಆತಂಕಕ್ಕೆ ಒಳಗಾಗುವರು ಬೇಡ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಂಸದೆ ಪ್ರಭಾ ಭರವಸೆ ನೀಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ