ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷರಾದ ರಮೇಶ್ ರಾವ್ ಮತ್ತು ಮಹಾಪ್ರಬಂಧಕರಾದ ಕಿರಣ್ ಹೆಚ್.ಜೆ. ಅವರು ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜ್ಯದ ಕೈಗಾರಿಕಾ ಅಭಿವೃದ್ಧಿ, ಹೊಸ ಯೋಜನೆಗಳು ಹಾಗೂ ಕೌಶಲ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಉದ್ಯಮ ಹಾಗೂ ಸರ್ಕಾರದ ನಡುವಿನ ಸಹಕಾರದ ಕುರಿತು ಈ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.




