Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂ ಸ್ವಾದೀನ ವಿರೋಧಿ ಹೋರಾಟ ಸಮಿತಿಯಿಂದ ಟ್ರಾಕ್ಟರ್ ಜಾಥಾ ಚಳುವಳಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬೆಳವಂಗಲ ಹೋಬಳಿಯ ಸುತ್ತಮುತ್ತಲ 2,100 ಎಕರೆ  ಫಲವತ್ತಾದ ಭೂಮಿಯನ್ನು  ಕೆಐಎಡಿಬಿ ಯಿಂದ ಭೂಸ್ವಾಧೀನ ವಿರೋದಿಸಿ ದೊಡ್ಡಬೆಳವಂಗಲ ಕೃಷಿ ಭೂಸ್ವಾಧೀನ ವಿರೋದ ಹೋರಾಟ ಸಮಿತಿ ಚಿಕ್ಕ ಬೆಳವಂಗಲದಿಂದ ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಛೇರಿ ವರೆವಿಗೂ ಟ್ರಾಕ್ಟರ್ ಜಾಥಾ ನಡೆಸಲಾಯಿತು.


ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೆನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿಗೆ ಟ್ರ್ಯಾಕ್ಟರ್‌ಛಲೋವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನೂರಾರು ಟ್ರ್ಯಾಕ್ಟ‌ರ್ ಮೂಲಕ ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಸಾವಿರಾರು ರೈತರು ಬಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಆಗ್ರಹಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ