Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂತುರು ಮತ್ತು ಹನಿ ನೀರಾವರಿ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (
PMRKVY)  ಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು 3 ದಿನಗಳ ತರಬೇತಿಯನ್ನು ಇದೇ ಮಾರ್ಚ್ 05 ರಿಂದ 07 ರವರೆಗೆ  ಚಿತ್ರದುರ್ಗ ತಾಲ್ಲೂಕಿನ ಆಸಕ್ತ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

       ತರಬೇತಿ ಕಾರ್ಯಕ್ರಮದಲ್ಲಿ ಮೊದಲನೇ ದಿನ ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞರಾದ ಅಂಜಿನಪ್ಪ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಸಮರ್ಪಕ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ಹಾಗೂ ರಸಾವರಿ ಪದ್ಧತಿ ಕುರಿತು ಮಾಹಿತಿ ನೀಡುವರು.

ಎರಡನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಹಾಗೂ ಕೀಟಶಾಸ್ತ್ರಜ್ಞರಾದ ಡಾ. ದಾನ ರೆಡ್ಡಿ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡುವರು. ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.

ತರಬೇತಿಯ ಮೂರನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಒಬ್ಬೂರಿನ ಶ್ರೀ ಹನುಮಂತ ನಾಯಕ್ ಅವರು ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಹಾಗೂ ಎರೆ ಗೊಬ್ಬರ ತಯಾರಿಕೆ ಕುರಿತು ಕುರಿತು ಮಾಹಿತಿ ನೀಡುವರು.

ಆದ ಪ್ರಯುಕ್ತ ಆಸಕ್ತ 50 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿ ಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಆರ್ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ