Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಳೆ ಸುಧಾರಿತ ಬೇಸಾಯ ಕುರಿತು ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂನಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ, ಬಾಳೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಆಯೋಜಿಸಲಾದ ತರಬೇತಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೇರೆಯುವ ಮೂಲಕ ಉದ್ಘಾಟಿಸಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಮಾತನಾಡಿದರು.

ಮಾವಿನ ನಂತರ ಬಾಳೆ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಮುಖವಾಗಿ ಏಲಕ್ಕಿ ಬಾಳೆ ಮತ್ತು ಪಚ್ಚ ಬಾಳೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಸಾವಿರ ಹೆಕ್ಟೇರಿಗಿಂತ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಸೂಕ್ಷ್ಮ ನೀರಾವರಿ ಘಟಕಗಳನ್ನು ಉಪಯೋಗಿಸುವುದರಿಂದ ನೀರಿನ ಮಿತ ಬಳಕೆ ಮತ್ತು ಗೊಬ್ಬರದ ಉಳಿತಾಯ, ನೀರು ಹಾಯಿಸಲು  ಕೂಲಿ ಕಾರ್ಮಿಕರ ಉಳಿತಾಯ, ಕಳೆಗಳ ನಿಯಂತ್ರಣ, ವಿದ್ಯುತ್ ಶಕ್ತಿ ಉಳಿತಾಯ ಹಾಗೂ ಕೊಳವೆಬಾವಿ ಮತ್ತು ತೆರೆದ ಬಾವಿಗಳಲ್ಲಿನ ನೀರಿನ ಸದ್ಬಳಕೆ ಮತ್ತು ಅವುಗಳ ಬಳಕೆಯ ಅವಧಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದರು.

ಕರ್ನಾಟಕ ರಾಜ್ಯವು ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಅಳವಡಿಸಿದ ರಾಜ್ಯವಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ರೈತರು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ ತುಂತುರು ನೀರಾವರಿ ಘಟಕ ಪಡೆಯಬಹುದಾಗಿದೆ. ಒಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿಗೆ ಸಹಾಯಧನ ಪಡೆದ ಸಾಮಾನ್ಯ ವರ್ಗದ ರೈತರಿಗೆ ಮತ್ತೊಮ್ಮೆ ಸಹಾಯಧನ ಪಡೆಯಲು ಅವಕಾಶವಿರುವುದಿಲ್ಲ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಪ್ರತಿ ಏಳು ವರ್ಷಕ್ಕೊಮ್ಮೆ ಸೂಕ್ಷ್ಮ ನೀರಾವರಿ ಘಟಕಗಳನ್ನು ಸಹಾಯಧನದಲ್ಲಿ ನೀಡಲು ಅವಕಾಶವಿರುತ್ತದೆಂದರು. ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೋರಿದರು.

ಜೈನ್ ಇರಿಗೇಷನ್ ಸಂಸ್ಥೆ ಪ್ರತಿನಿಧಿ ದೇವರಾಜ್ ಕೆ ಅವರು ಕೃಷಿ ಹಾಗೂ ತೋಟಗಾರಿಕಾ ಬೆಳಗಳಲ್ಲಿ ನೀರಿನ ಮಿತ ಬಳಕೆ ಹಾಗೂ ಉತ್ಪಾದಕತೆ ಹೆಚ್ಚಿಸಲು ಸ್ಪ್ರಿಂಕ್ಲರ್ ಮತ್ತು ಹನಿ ನೀರಾವರಿ ತಾಂತ್ರಿಕತೆ, ರಸಾವರಿ ತಂತ್ರಜ್ಞಾನ ಮತ್ತು ಅವುಗಳ ನಿರ್ವಹಣೆ ಹಾಗೂ ಅಂಗಾಂಶ ಬಾಳೆಯ ಕುರಿತು ವಿಷಯ ಮಂಡನೆ ಮಾಡಿದರು.

ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ತಜ್ಞ ಡಾ. ಮಹಾಂತೇಶ್ ಮಾತನಾಡಿ ರೋಗ ಮತ್ತು ಕೀಟ ರಹಿತ ಆರೋಗ್ಯವಾದ  ಬಾಳೆ ಕಂದುಗಳನ್ನು  ಜೂನ್-ಜುಲೈ ತಿಂಗಳಲ್ಲಿ ನಾಟಿ ಮಾಡುವುದು ಸೂಕ್ತವಾಗಿದೆ.  ಬಾಳೆಗೊನೆಗಳು ಸಂಪೂರ್ಣವಾಗಿ ಹೊರಹೊಮ್ಮಿದ ನಂತರ ೫, ೬ ಮತ್ತು ೯ನೇ ತಿಂಗಳಲ್ಲಿ ಅರ್ಕ ಬಾಳೆ ಸ್ಪೆಷಲ್ ೭೫ ಗ್ರಾಂ ಪ್ರತಿ  ೧೫ ಲೀಟರ್ ನೀರಿನ ಕ್ಯಾನಿಗೆ ಒಂದು ಶಾಂಪು ಸಾಚಟ್ ಅಥವಾ ಎರಡು ಮಿಲಿ ಸಾಬೂನು ಸಾಬೂನು ದ್ರಾವಣ ಮತ್ತು ಎರಡು ನಿಂಬೆಹಣ್ಣಿನ ರಸವನ್ನು ನೀರಿನಲ್ಲಿ ಚೆನ್ನಾಗಿ ಮಿಶ್ರಣ ಮಾಡಿ ಸಿಂಪಡಿಸಬೇಕು. ಪ್ರತಿ ಹೆಕ್ಟರಿಗೆ ೩೦ ಕೆಜಿ ಅರ್ಕ ಬಾಳೆ ಸ್ಪೆಷಲ್  ಬಳಸುವುದರಿಂದ ಶೇಕಡ ೧೫ ರಿಂದ ೨೦ ರವರೆಗೆ ಹೆಚ್ಚಿನ ಇಳುವರಿ ಪಡೆಯಬಹುದೆಂದರು. ಕಂದು ಅಥವಾ ಅಂಗಾಂಶ ಸಸಿಗಳನ್ನು ನಾಟಿ ಮಾಡುವಾಗ ಅಲಸಂದೆಯನ್ನು ಬಿತ್ತನೆ ಮಾಡಿ, ೪೫ ದಿನಗಳ ನಂತರ, ಬೆಳೆದ ಅಲಸಂದೆಯನ್ನು ಮಣ್ಣಿನಲ್ಲಿ ಸೇರಿಸುವುದು

ಮತ್ತು ೧೦ ದಿನಗಳ ನಂತರ ಎರಡನೇ ಬಾರಿ ಅಲಸಂದೆಯನ್ನು ಬಿತ್ತನೆ ಮಾಡಿ, ೧೦೦ ದಿನಗಳ ನಂತರ ಮಣ್ಣಿನಲ್ಲಿ ಸೇರಿಸುವುದರಿಂದ ಬಾಳೆಯಲ್ಲಿ ಕಳೆಯನ್ನು ಅತ್ಯುತ್ತಮವಾಗಿ ನಿಯಂತ್ರಿಸಬಹುದು. ಅಲಸಂದೆ ಬೆಳೆಯನ್ನು ಎರಡು ಬಾರಿ ಬೆಳೆದು ಮಣ್ಣಿನಲ್ಲಿ ಸೇರಿಸಿ ಮಿಶ್ರಣ ಮಾಡುವುದರಿಂದ ಮಣ್ನಿನ ಫಲವತ್ತತೆ ಹೆಚ್ಚಿಸುವುದಲ್ಲದೆ ಕಳೆಗಳನಿಯಂತ್ರಿಸಲು ಸಹಕರಿಯಾಗಿದೆಂದರು. ಬಾಳೆ ಬೆಳೆ ತೋಟದ ಸುತ್ತಲೂ ಗಾಳಿ ತಡೆಯಾಗಿ  ಚೊಗಚೆಯನ್ನು  ಎರಡು ಸಾಲುಗಳಲ್ಲಿ ಬೆಳೆಯಬೇಕು ಹಾಗೂ  ಸೊರಗು ರೋಗ ಬಾದೆಗೆ ಒಳಗಾದ ಕ್ಷೇತ್ರದಲ್ಲಿ ಎರಡು ವರ್ಷ ಬೆಳೆ ಬದಲಾವಣೆ ಮಾಡುವುದು ಸೂಕ್ತವೆಂದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ