Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಕುರಿತು ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ
 ದೊಡ್ಡಬಳ್ಳಾಪುರ ತಾಲೂಕಿನ ಆರೋಡಿ‌ವಲಯದ ಹೊಸಹಳ್ಳಿ ಗ್ರಾಮದಲ್ಲಿ ಸಿರಿಧಾನ್ಯ ಬಳಕೆಯ ಬಗ್ಗೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ ಆಯೋಜಿಸಲಾಯಿತು. ಕೃಷಿ ವಿಜ್ಞಾನ ಕೇಂದ್ರ ಹಾಡೋನಹಳ್ಳಿ ವಿಜ್ಞಾನಿ ವೀರ ನಾಗಪ್ಪ ಮಾತನಾಡಿ ಮಣ್ಣಿನ ಫಲವತ್ತತೆ, ಹವಾಮಾನ ವೈಪರಿತ್ಯದಿಂದ ಕೃಷಿ ಬೆಳೆಗಳ ನಿರ್ವಹಣೆ, ಮಣ್ಣು ಪರೀಕ್ಷೆ, ನೀರು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುಧಾ ಬಾಸ್ಕರ್ ಮಾತನಾಡಿ ಹಿಂದೆ ಬಡವರ ಆಸ್ತಿಯಾಗಿದ್ದ ಸಿರಿಧಾನ್ಯ ಬರಬರುತ್ತಾ ಶ್ರೀಮಂತರ ಆಹಾರವಾಗಿದೆ. ಸದಸ್ಯರು ತಮ್ಮ ಮನೆಗಾದರು ಅರ್ದ ಎಕರೆ ಸಿರಿಧಾನ್ಯ ಬೆಳೆದಲ್ಲಿ ಮನೆಯವರ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು. 

ಕೆವಿಕೆ ಕೇಂದ್ರದ ಗೃಹ ವಿಜ್ಞಾನಿ ಮೇಘನ ಮಾತನಾಡಿ ಸಿರಿಧಾನ್ಯ ಬೆಳೆಕೆ ಮಾಡುವುದರಿಂದ ಆರೋಗ್ಯ ವೃದ್ಧಿ ಆಗುವುದು, ಸಿರಿಧಾನ್ಯ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು. ಕೇಂದ್ರದ ವತಿಯಿಂದ ರೈತರನ್ನು ಆಯ್ಕೆ ಮಾಡಿ ತರಬೇತಿ ನೀಡಿ ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ ಮಾಡಲಾಗುತ್ತದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕ ಲೋಹಿತ್ ಗೌಡ ಮಾತನಾಡಿ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ರೈತರಿಗೆ ಇಲಾಖೆಗಳ ಮೂಲಕ ತರಬೇತಿ ನೀಡುವುದು ಅಧ್ಯಾಯನ ಪ್ರವಾಸದ ಮೂಲಕ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಮಾಡಲಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಮಾಡುತ್ತಿದ್ದು ಸದಸ್ಯರು ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

 ಒಕ್ಕೂಟದ ಉಪಾಧ್ಯಕ್ಷ ರಘು, ವಲಯ ಮೇಲ್ವಿಚಾರಕ ಸುಪ್ರೀತ್, ಒಕ್ಕೂಟದ ರೋಹಿಣಿ, ಸೇವಾಪ್ರತಿನಿಧಿಗಳಾದ ಸ್ವಾತಿ ಮತ್ತು ಭಾಗ್ಯಮ್ಮ, ಪ್ರಗತಿಬಂದು ಸಂಘದ ಸದಸ್ಯರು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಮತ್ತು ರೈತರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ