Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 12ರಂದು ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕಾ ಕುರಿತು ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿಮಿಟೆಡ್ ಸಹಭಾಗಿತ್ವದಲ್ಲಿ ಇದೇ ಜೂನ್ 12ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕಾ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.


ತರಬೇತಿ ಕಾರ್ಯಕ್ರಮದಲ್ಲಿ ತುಮಕೂರಿನ ಮಲ್ಟಿಪ್ಲೆಕ್ಸ್ ಬಯೋಟೆಕ್ ಪ್ರೈ ಲಿ, ತಾಂತ್ರಿಕ ಮುಖ್ಯಸ್ಥ ಎಸ್.ಕುಮಾರ್ ಅವರು ಸಾವಯವ ಕೃಷಿಯ ಅಗತ್ಯತೆ ಮತ್ತು ಅನುಕೂ¯ಗಳು ಹಾಗೂ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಬಳಕೆ  ಬಗ್ಗೆ ವಿಷಯ ಮಂಡನೆ ಮಾಡುವರು.


ಭರಮಸಾಗರದ ಪ್ರಗತಿಪರ ರೈತ ಲೋಕೇಶ್ ಅವರು ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ತಮ್ಮ ಅನುಭವ ಹಂಚಿಕೊಳ್ಳುವರು ಹಾಗೂ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ಬಳಸಿ ಪ್ರಾತ್ಯಕ್ಷಿಕೆಯ ಮೂಲಕ ಅಡಿಕೆ ಸಿಪ್ಪೆಯಿಂದ ಕಾಂಪೋಷ್ಟ್ ತಯಾರಿಕೆಯ ವಿಧಾನವನ್ನು ತೋರಿಸಲಾಗುವುದು. ಆದ ಪ್ರಯುಕ್ತ ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.


ಮೊದಲು ನೋಂದಾವಣಿ ಮಾಡಿಕೊಂಡ 70 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ. ನೋಂದಾಯಿಸಿಕೊಂಡು ತರಬೇತಿಗೆ ಹಾಜರಾಗುವ ಆಸಕ್ತ ರೈತರಿಗೆ ತರಬೇತಿಯ ಕೊನೆಯಲ್ಲಿ ಕಾಂಪೋಷ್ಟ್ ಮಾಡುವ ಅಣು ಜೀವಿ ಗೊಬ್ಬರವನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ