Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂತುರು ಮತ್ತು ಹನಿ ನೀರಾವರಿ ನಿರ್ವಹಣೆ ಕುರಿತು ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿಕೇಂದ್ರದಲ್ಲಿ ಇದೇ .21 ಮತ್ತು 22ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಮತ್ತು ರಾಂಪುರ ಹೋಬಳಿ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಡಾ. ರಾಜಶೇಖರ ಡಿ ಭಾರ್ಕೆರ್ ಸಹ ಪ್ರಾಧ್ಯಪಕರು, ಇಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ಮಹಾ ವಿದ್ಯಾಲಯ, ಬಬ್ಬೂರು ಇವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ ಘಟಕಗಳ ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.

 ಹಾಗೂ ಡಾ.ಶಶಿಧರ ಬಿ.ಜಿ. ನಿವೃತ್ತ ಪ್ರಾಧ್ಯಪಕರು (ಬೇಸಾಯಶಾಸ್ತ್ರ), ನೀರಾವರಿ ತಜ್ಞರು ಮತ್ತು ಸಲಹೆಗಾರರು ಇವರು ಕೃಷಿ ಸಾಲು ಬೆಳೆಗಳಲ್ಲಿ ಹನಿ ನೀರಾವರಿ ಪದ್ದತಿಯ ಸಮರ್ಥ ಬಳಕೆ ಕುರಿತು ವಿಷಯ ಮಂಡನೆ ಮಾಡುವರು.
.21ರಂದು ಆಸಕ್ತ ಮೊಳಕಾಲ್ಮೂರು ತಾಲ್ಲೂಕಿನ ಕಸಬಾ ಹೋಬಳಿಯ  60 ಜನ ರೈತಭಾಂದವರು ಮತ್ತು .22ರಂದು ಆಸಕ್ತ ರಾಂಪುರ ಹೋಬಳಿಯ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೊಂದಾಯಿಸಲು ಶ್ರೀ ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ ಅವರು ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದ್ದಾರೆ.

ಮೊದಲು ನೋಂದಣಿ ಮಾಡಿಕೊಂಡ 60 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್ಐಡಿ ಕಾರ್ಡ್, ರೇಷನ್ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರುವಂತೆ ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ