Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ.01ರಂದು ತರಬೇತಿ ಕಾರ್ಯಗಾರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಗಸ್ಟ್ 01ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಬ್ಯೂರೋ ಆಫ್ ಎನರ್ಜಿ ಎಫಿಷಿಎನ್ಸಿ (ಬಿ.ಇ.ಇ) ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಯಮಿತ (ಕೆ.ಆರ್.ಇ.ಡಿ.ಎಲ್) ಸಂಸ್ಥೆಗಳ ಸಹಯೋಗದಲ್ಲಿ ಬಿಇಇ ಸ್ಟಾರ್ ಲೇಬಲ್‍ವುಳ್ಳ ಇಂಧನದಕ್ಷ ಪಂಪ್‍ಸೆಟ್ ಬಳಕೆ ಮತ್ತು ಜಲ ಸಂರಕ್ಷಣೆ ಜಾಗೃತಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ತರಬೇತಿ ಕಾರ್ಯಕ್ರಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಡಾ. ರಾಜಶೇಖರ್ ಭಾರ್ಕೇರ ಅವರು ಬಿಇಇ ಸ್ಟಾರ್ ಲೇಬಲ್ ಹೊಂದಿರುವ ಹೆಚ್ಚು ವಿದ್ಯುತ್ ದಕ್ಷಯುಳ್ಳ ಪಂಪ್‍ಸೆಟ್‍ಗಳ ಕುರಿತು ವಿಷಯ ಮಂಡನೆ ಮಾಡುವರು. ಅಂತರ್ಜಲ ಮತ್ತು ಮಳೆ ನೀರು ಕೊಯ್ಲು ತಜ್ಞರಾದ ಡಾ.ಎನ್.ದೇವರಾಜರೆಡ್ಡಿ ಅವರು ಮಳೆನೀರು ಕೊಯ್ಲು-ಸಂಗ್ರಹಣೆ, ಸಂರಕ್ಷಣೆ ಮತ್ತು ಮಿತ ಬಳಕೆ ಕುರಿತು ಮಾಹಿತಿ ನೀಡುವರು.


ನೇಟಫಿಮ್ ಸಂಸ್ಥೆಯ ಬೇಸಾಯಶಾಸ್ತ್ರಜ್ಞರಾದ ಅಂಜಿನಪ್ಪ ಅವರು ಕೃಷಿಯಲ್ಲಿ ನೀರಿನ ಸಮರ್ಥ ಬಳಕೆಗೆ ಹನಿ ಮತ್ತು ತುಂತುರು ನೀರಾವರಿ ತಾಂತ್ರಿಕತೆ ಕುರಿತು ವಿಷಯ ಮಂಡನೆ ಮಾಡುವರು.


ಸೆಲ್ಕೋ ಸಂಸ್ಥೆಯ ವ್ಯವಸ್ಥಾಪಕ ಮಂಜುನಾಥ ಭಾಗವತ್ ಅವರು ಸೂರ್ಯಘರ್‍ಯೋಜನೆ, ಸೋಲಾರ್ ಪಂಪ್‍ಸೆಟ್‍ನ ಪಿಎಂ ಕುಸುಮ್‍ಯೋಜನೆ ಹಾಗೂ ಸೋಲಾರ್ ಆಧಾರಿತ ವಿವಿಧ ಜೀವನೋಪಾಯ ಚಟುವಟಿಕೆಗಳ ಕುರಿತು ಮಾಹಿತಿ ನೀಡುವರು. ತದನಂತರ ಇಂಧನದಕ್ಷ ಕೃಷಿ ಪಂಪ್‍ಸೆಟ್ ನಿರ್ವಹಣೆಯ ಕುರಿತು ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗುವುದು.

ಆದ ಪ್ರಯುಕ್ತ ಆಸಕ್ತ 80 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.


ಮೊದಲು ನೋಂದಾವಣಿ ಮಾಡಿಕೊಂಡ 80 ರೈತಭಾಂದವರು ಫ್ರೂಟ್ಸ್ ಐಡಿ (ಎಫ್ಐಡಿ) ಅಥವಾ ಆಧಾರ್‍ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ಕೋರಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ