Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇರುವೆ ಕಾಟಕ್ಕೆ ಮರಗಳ ಮಾರಣ ಹೋಮ ಮಾಡಿದ ಭೂಪರು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಇರುವೆ ಕಾಟ ಹೆಚ್ಚಾಗಿದೆ ಎಂಬ ಕಾರಣಕ್ಕೆ ಸರ್ಕಾರಿ ಕಚೇರಿಯ ಆವರಣದಲ್ಲಿ ಬೃಹತ್ ಮರಗಳನ್ನು ಕಡಿಸಿರುವ ಘಟನೆ ನಡೆದಿದೆ.


 ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಸೊಗಸಾಗಿ ಬೆಳದಿದ್ದ ಅಶೋಕ ಮರದ ದಿಮ್ಮಿಗಳನ್ನು ಬಿಟ್ಟು ದೊಡ್ಡ ದೊಡ್ಡ ರೆಂಬೆ-ಕೊಂಬೆಗಳನ್ನೂ ಸೇರಿದಂತೆ ಮರದಲ್ಲಿ ಒಂದು ಎಲೆಯನ್ನು ಬಿಡದೆ ಕಡಿದು ಹಾಕಲಾಗಿದ್ದು ಪರಿಸರ ಪ್ರೇಮಿಗಳ ಕೆಂಗ್ಗಣ್ಣಿಗೆ ಗುರಿಯಾಗಿದ್ದಾರೆ. 

 ಎರಡನೇ ಶನಿವಾರದ ರಜಾ ದಿನವಾದ ನಿನ್ನೆ ಮರಗಳನ್ನು ಕಡಿದಿದ್ದು ಇಂದು ಬೆಳಿಗ್ಗೆ ಕಡಿದ ಮರಗಳನ್ನು ಟ್ರಾಕ್ಟರ್‌ಗೆ ತುಂಬಿ ಸಾಗಿಸಲಾಗಿದೆ. 

  ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಮುನಿರಾಜು, ಕೆಂಪು ಇರುವೆಗಳ ಕಾಟ ಹೆಚ್ಚಾಗಿತ್ತು. ಬೃಹತ್ತಾಗಿ ಬೆಳೆದು ನಿಂತಿದ್ದ ಮರಗಳು ಪಕ್ಕದಲ್ಲಿನ ಕಟ್ಟಡಕ್ಕೂ ತೊಂದರೆ ಉಂಟು ಮಾಡುತ್ತಿದ್ದವು. ಇರುವೆಗಳಿಂದ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೂ ತೊಂದರೆಯಾಗುತ್ತಿತ್ತು. ಹಾಗಾಗಿ ಮರದ ಕೊಂಬೆಗಳನ್ನು ಕತ್ತರಿಸಲಾಗಿದೆ. ಅದು ಮತ್ತೆ ಬೆಳೆಯುತ್ತದೆ ಎಂದರು. 

  ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಸಾರಥ್ಯದ ತಾಲೂಕು ಅಧ್ಯಕ್ಷ ವಿನಯ್ ಕುಮಾರ್ ಹಾಗೂ ನಗರಾಧ್ಯಕ್ಷ ಶಿವಾನಂದ ಮಾತನಾಡಿ ಬೇಸಿಗೆ ಕಾಲ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮರಗಳ ಮಾರಣ ಹೋಮ ಮಾಡುವುದು ತರವಲ್ಲ, ಮರ ಕಡಿಯಲು ಅರಣ್ಯ ಇಲಾಖೆ ವತಿಯಿಂದ ಒಪ್ಪಿಗೆ ಪಡೆದಿದ್ದಾರಾ.. ಏನೋ ಗೊತ್ತಿಲ್ಲ.

ಹಾಗೆ ನೋಡಿದರೆ ಇರುವೆ ಕಾಟಕ್ಕೆ ನಗರದಲ್ಲಿರುವ ಉದ್ಯಾನವನಗಳ ಮರಗಳನ್ನೂ ಕಡಿಯಬೇಕಾಗುತ್ತೆ, ಇರುವೆಗಳನ್ನು ತಡೆಗಟ್ಟಲು ಬೇರೆ ಮಾರ್ಗ ಇದೆ. ಸಾರ್ವಜನಿಕರಿಗೆ ಪರಿಸರದ ಬಗ್ಗೆ ಅರಿವು ಮೂಡಿಸಬೇಕಿದ್ದ ಸರ್ಕಾರಿ ಅಧಿಕಾರಿಗಳೆ ಮರಗಳ ಮಾರಣ ಹೋಮಕ್ಕೆ ಮುಂದಾಗಿದ್ದು ಸಹಿಸಲು ಅಸಾಧ್ಯ ಎಂದು ಆಕ್ರೋಶ ಹೊರ ಹಾಕಿದರು.

ತಾಲ್ಲೂಕು ಪಂಚಾಯತಿ ಒಳಗಿರುವ ಹೆಗ್ಗಣಗಳನ್ನು ಹೊರ ಹಾಕುವುದನ್ನು ಬಿಟ್ಟು ಹೊರಗಿನ ಮರಗಳನ್ನು ಇರುವೆ ಕಾಟದ ಕುಂಟು ನೆಪ ಹೇಳಿ ಕಟಾವು ಮಾಡಿರುವ ಘಟನೆಗೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ