Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗಲಿದ 9 ಮಂದಿ ಪತ್ರಕರ್ತರುಗಳಿಗೆ ಶ್ರದ್ಧಾಂಜಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಗಲಿದ ಪತ್ರಕರ್ತರಿಗೆ ಕೆಯುಡಬ್ಲೂಜೆ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹಿರಿಯ ಪತ್ರಕರ್ತರಾದ ಬೆಂಗಳೂರಿನ ಟಿ.ಜಿ.ಅಶ್ವತ್ಥನಾರಾಯಣ, ಬಾಗಲಕೋಟೆಯ ಬಸವರಾಜ ಬಹಿರಶೆಟ್ಟಿ, ಉಡುಪಿಯ ಜಯಕರ ಸುವರ್ಣ, ದಾವಣಗೆರೆಯ ಎಂ.ವೀರಪ್ಪಭಾವಿ, ರಾಮನಗರದ ಗಂಗಾಧರ್, ರಾಯಚೂರಿನ ಸಂತೋಷ ಸಾಗರ, ಮಂಗಳೂರಿನ ಭುವನೇಂದ್ರ ಪುದವೆಟ್ಟು, ವೀರೇಶ್, ಸಕಲೇಶಪುರದ ಚಂದ್ರಶೇಖರ್ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಎರಡು ನಿಮಿಶ ಮೌನಾಚರಣೆ ಮಾಡಿ ಶ್ರದ್ದಾಂಜಲಿ ಸಲ್ಲಿಸಲಾಯಿತು. 

ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಅಗಲಿದ ಹಿರಿಯರನ್ನು ಸ್ಮರಿಸುವುದು ಸಂಘದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅವರೆಲ್ಲರೂ ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸುವುದು ಕೂಡ ಜವಬ್ದಾರಿಯಾಗಿದೆ ಎಂದರು.

ಮನೆಯಂಗಳದಲ್ಲಿ ಸನ್ಮಾನ ಮಾಡಿದ್ದ ಟಿ.ಜಿ.ಅಶ್ವತ್ ನಾರಾಯಣ ಅವರಿಗೆ ಇಂದು ಶ್ರದ್ಧಾಂಜಲಿ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ ಎಂದರು.

ಭಾರತೀಯ ಕಾರ್ಯನಿತರ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಟಿ.ಜಿ.ಅಶ್ವತ್ಥ ನಾರಾಯಣ್ ಆತ್ಮೀಯ ಗುಣವನ್ನು ಮೈಗೂಡಿಸಿಕೊಂಡಿದ್ದವರು, ಕನ್ನಡ ಪತ್ರಿಕೋದ್ಯಮಕ್ಕೆ ಅವರ ಕೊಡುಗೆ ಅನನ್ಯ ಎಂದರು.

ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಷಾ ಖಾನಂ ಮಾತನಾಡಿ, ದೂರದರ್ಶನದ ಅರೆಕಾಲಿಕ ವರದಿಗಾರರಾಗಿದ್ದ ಜಯಕರ ಸುವರ್ಣರವರು ಉತ್ತಮ ಸಂಘಟಕರಾಗಿದ್ದರು ಮತ್ತು ವೃತ್ತಿ ಬದ್ಧತೆ ಮೈಗೂಡಿಸಿಕೊಂಡಿದ್ದರು ಎಂದರು.

ಕುಂದಾಪುರದ ಸುರೇಂದ್ರ ಶೆಣೈ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸಂಘವನ್ನು ಕಟ್ಟಿ ಬೆಳೆಸುವಲ್ಲಿ ಜಯಕರ ಅವರು ಶ್ರಮಿಸಿದ್ದಾರೆ. ಗಮನ ಸೆಳೆಯುವ ಪತ್ರಕರ್ತರಾಗಿಯೂ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಅಶ್ವತ್ಥ ನಾರಾಯಣರವರ ಸಹೋದರ ಟಿ.ಜಿ.ಕೃಷ್ಣಮೂರ್ತಿ ಮಾತನಾಡಿ, ನಮ್ಮನ್ನು ವಿಚಾರವಂತಿಕೆಯಲ್ಲಿ ರೂಪಿಸಿಕೊಟ್ಟ ಹೆಗ್ಗಳಿಕೆ ನಮ್ಮಣ್ಣನದ್ದು. ಪತ್ರಕರ್ತರಾಗಿ ಅವರ ಮಾಡಿದ ಸೇವೆ ಅನನ್ಯವಾದದ್ದು ಎಂದರು.

ದಾವಣಗೆರೆ ಜಿಲ್ಲಾಧ್ಯಕ್ಷ ಮಂಜುನಾಥ್ ಏಕಕೋಟೆ ಮಾತನಾಡಿ, ದಾವಣಗೆರೆ ಜಿಲ್ಲೆಗೆ ವಲಸೆ ಬಂದ ವೀರಪ್ಪಭಾವಿ ಸಂಘದ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ ಮತ್ತಿತರರು ಮಾತನಾಡಿದರು.

ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತೆ ರಶ್ಮಿ, ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಎಸ್.ಡಿ. ಚಿಕ್ಕಣ್ಣ, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ ಮತ್ತಿತರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ