ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ.
11 ವರ್ಷದ ದಕ್ಷಾ, ನಾಲ್ಕು ವರ್ಷದ ಧನುಷ್ ಮೃತಪಟ್ಟ ಮಕ್ಕಳು.ಗುರುಮೂರ್ತಿ ರವರ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿ ಮುಳುಗಿ ಮೃತರಾಗಿರಾಗಿದ್ದಾರೆ.ಕೃಷಿ ಹೊಂಡಕ್ಕೆ ಸರಿಯಾಗಿ ಭದ್ರತೆ ಮಾಡದ ತೋಟದ ಮಾಲೀಕ ಗುರುಮೂರ್ತಿ ವಿರುದ್ಧ 106 BNS ರೀತಿಯ ಪ್ರಕರಣ ದಾಖಲಿಸಿಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.



