Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ವೈಫಲ್ಯದಿಂದ 'ಉಜ್ವಲ' ಯೋಜನೆ ಈಗ 'ಸೌದೆ' ಭಾಗ್ಯವಾಗಿದೆ: ಡಿ.ಕೆ ಶಿವಕುಮಾರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುದ್ಧಗಳ ನೆಪವೊಡ್ಡಿ ಕೇಂದ್ರ ಸರ್ಕಾರವು ದೇಶದ ಬೆಲೆ ಏರಿಕೆ ಸಮಸ್ಯೆಯನ್ನು ಕಡೆಗಣಿಸುತ್ತಿದೆ. ಕೇಂದ್ರದ ತಪ್ಪು ವಿದೇಶಾಂಗ ನೀತಿಗಳಿಂದಾಗಿ ಬಡವರ ಬದುಕು ದುಸ್ತರವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಕಟುವಾಗಿ ಟೀಕಿಸಿದರು.

​​ಸೌದೆ ಭಾಗ್ಯ: "ಕೇಂದ್ರದ 'ಉಜ್ವಲ' ಯೋಜನೆ ವಿಫಲವಾಗಿದ್ದು, ದೇಶದಲ್ಲಿ ಮತ್ತೆ 'ಸೌದೆ' ಯುಗ ಆರಂಭವಾಗಿದೆ. ಅಡುಗೆ ಅನಿಲದ ಸಮರ್ಪಕ ಪೂರೈಕೆ ಇಲ್ಲದೆ ಸಾಮಾನ್ಯ ಜನರು ಮತ್ತು ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಮೋದಿಯವರು ನಮಗೆ ಇಂದು 'ಸೌದೆ ಭಾಗ್ಯ' ನೀಡಿದ್ದಾರೆ," ಎಂದು ವ್ಯಂಗ್ಯವಾಡಿದರು.

​ಬೆಲೆ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಇಂದಿನಿಂದ ಟೋಲ್ ದರ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

​ಔಷಧಿಗಳ ಬೆಲೆ ಹೆಚ್ಚಳ: ಸುಮಾರು 900ಕ್ಕೂ ಹೆಚ್ಚು ಅಗತ್ಯ ಔಷಧಿಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಬದುಕನ್ನು ಕೇಂದ್ರ ಸರ್ಕಾರ ಮತ್ತಷ್ಟು ಕಷ್ಟಕ್ಕೆ ದೂಡಿದೆ ಎಂದು ದೂರಿದರು.

​ಜನರನ್ನೇ 'ಏಪ್ರಿಲ್ ಫೂಲ್' ಮಾಡಿದ ಕೇಂದ್ರ: ಏಪ್ರಿಲ್ ಒಂದರಿಂದಲೇ ವಿವಿಧ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು 'ಏಪ್ರಿಲ್ ಫೂಲ್' ಮಾಡಿದೆ. ಜನರ ಆರ್ಥಿಕ ಸವಾಲುಗಳನ್ನು ನೀಗಿಸುವ ಬದಲು ಅವರಿಗೆ ಹೆಚ್ಚಿನ ಹೊರೆ ಹೊರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

​'ಅಚ್ಛೇ ದಿನ್' ಎಲ್ಲಿವೆ?
​"
ಅಚ್ಛೇ ದಿನಗಳು ಬರುತ್ತವೆ ಎಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರೇ, ಈಗ ಆ ದಿನಗಳು ಎಲ್ಲಿವೆ? ಈಗ 'ಅಚ್ಛೇ ದಿನಗಳು' ಹೋಗಿ 'ಕಚ್ಚಾ ದಿನಗಳು' ಬಂದಿವೆ ಎಂದು ಹೇಳಬೇಕಿದೆ," ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ