Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಿಭಟನಾಕಾರರ ಬಂಧನ ಕುರಿತು ಯುಎನ್‌ಕಳವಳ: ಭಾರತದಿಂದ ತೀವ್ರ ಆಕ್ಷೇಪ ಹಾಗೂ ತಿರುಗೇಟು

ಚಂದ್ರವಳ್ಳಿ ನ್ಯೂಸ್, ಹೊಸದಿಲ್ಲಿ:
ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಬೆಂಬಲಿಗರ ಬಂಧನದ ವಿಚಾರವಾಗಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ ವ್ಯಕ್ತಪಡಿಸಿರುವ ಕಳವಳವನ್ನು ಭಾರತವು "ದೇಶದ ಆಂತರಿಕ ವಿಷಯಗಳಲ್ಲಿನ ಅನಗತ್ಯ ಹಸ್ತಕ್ಷೇಪ" ಎಂದು ತೀವ್ರವಾಗಿ ಖಂಡಿಸಿದೆ.

ಇಂಡಿಯಾ ಯುಎನ್‌ತನ್ನ ಎಕ್ಸ್‌ಖಾತೆಯಲ್ಲಿ ತೀವ್ರ ಸ್ವರೂಪದ ಹೇಳಿಕೆ ನೀಡಿ, OHCHR ನ ಕಳವಳಗಳನ್ನು "ಅಸಮಂಜಸ" ಎಂದು ಕರೆದಿದೆ. ಅಲ್ಲದೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗವು ಬೇರೆಡೆ ನಡೆಯುತ್ತಿರುವ ಬೃಹತ್ ಪ್ರಮಾಣದ ಪ್ರತಿಭಟನೆಗಳತ್ತಲೂ ಗಮನಹರಿಸಬೇಕು ಎಂದು ಸಲಹೆ ನೀಡಿದೆ.

ಭಾರತದ ಸ್ಪಷ್ಟನೆ: "ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇಲ್ಲಿ ಶಾಂತಿಯುತವಾಗಿ ಒಗ್ಗೂಡುವ ಹಕ್ಕನ್ನು ನಮ್ಮ ಸಂವಿಧಾನವು ಖಾತರಿಪಡಿಸಿದೆ ಹಾಗೂ ದೃಢವಾದ ಸಂಸ್ಥೆಗಳು, ಸ್ವತಂತ್ರ ನ್ಯಾಯಾಂಗ ಮತ್ತು ಮುಕ್ತ ಮಾಧ್ಯಮಗಳು ಅದನ್ನು ರಕ್ಷಿಸುತ್ತವೆ. ಪ್ರತಿಯೊಂದು ಪ್ರಜಾಪ್ರಭುತ್ವದಲ್ಲಿಯೂ ಇರುವಂತೆ, ಭಾರತೀಯ ನಾಗರಿಕರು ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ವಿಧಿಸಲಾದ ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟು ಈ ಹಕ್ಕನ್ನು ಚಲಾಯಿಸುತ್ತಾರೆ. ಅಧಿಕಾರಿಗಳು ಕಾನೂನಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಾರೆ ಮತ್ತು ಯಾವುದೇ ಕುಂದುಕೊರತೆಗಳ ಪರಿಹಾರಕ್ಕಾಗಿ ನಮ್ಮ ನ್ಯಾಯಾಲಯಗಳು ಎಲ್ಲರಿಗೂ ಲಭ್ಯವಿರುತ್ತವೆ" ಎಂದು ಭಾರತ ಸ್ಪಷ್ಟಪಡಿಸಿದೆ.

ಸಿಜೆಪಿ ಪ್ರತಿಭಟನಾಕಾರರ ಬಂಧನ ಹಿನ್ನೆಲೆ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಲು ಯತ್ನಿಸುತ್ತಿದ್ದ ಸಿಜೆಪಿ ನಾಯಕರು, ಬೆಂಬಲಿಗರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಸುಮಾರು 3,000 ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ರಾಷ್ಟ್ರ ರಾಜಧಾನಿಯತ್ತ ನುಗ್ಗಲು ಯತ್ನಿಸುತ್ತಿದ್ದ ಸಿಜೆಪಿ ಬೆಂಬಲಿಗರ ಹರಿವನ್ನು ತಡೆಯಲು, ಪೊಲೀಸರು ಇಂಟರ್ನೆಟ್ ಹಾಗೂ ದೆಹಲಿ ಮೆಟ್ರೋ, ಬಸ್ ಮತ್ತು ರೈಲುಗಳಂತಹ ಸಾರಿಗೆ ಸಂಪರ್ಕಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಸಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದರು. ಅಲ್ಲದೇ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ವಿಮಾನದಲ್ಲೇ ವಶಕ್ಕೆ ಪಡೆಯಲಾಗಿದ್ದು, ಇತರೆ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನೂ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ವಿಶ್ವಸಂಸ್ಥೆಯ ವಕ್ತಾರರ ಹೇಳಿಕೆ: ಶನಿವಾರ ನೀಡಿದ ಹೇಳಿಕೆಯಲ್ಲಿ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಕ್ತಾರ ತಮೀನ್ ಅಲ್-ಖೀತನ್ ಅವರು, "ದೆಹಲಿಯಲ್ಲಿ ಇಂದು ನಡೆದ ಬೃಹತ್ ಪ್ರತಿಭಟನೆಗಳ ಮೊದಲು ಮತ್ತು ಆ ಸಮಯದಲ್ಲಿ ಭಾರತದಲ್ಲಿ ಪ್ರತಿಭಟನಾಕಾರರು, ಪ್ರತಿಭಟನಾ ನಾಯಕರು, ನಾಗರಿಕ ಸಮಾಜದ ಸಂಘಟನೆಗಳ ಸದಸ್ಯರು, ವಕೀಲರು ಮತ್ತು ಪತ್ರಕರ್ತರನ್ನು ಸಾಮೂಹಿಕವಾಗಿ ವಶಕ್ಕೆ ಪಡೆಯಲಾಗಿದೆ ಎಂಬ ವರದಿಗಳ ಬಗ್ಗೆ ತಮ್ಮ ಕಚೇರಿಯು ಕಳವಳ ವ್ಯಕ್ತಪಡಿಸಿದೆ" ಎಂದು ತಿಳಿಸಿದ್ದರು.

ಯುಎನ್‌ನ ಈ ಹೇಳಿಕೆಗೆ ತಿರುಗೇಟು ನೀಡಿರುವ ನವದೆಹಲಿ, OHCHR ನ ನಿಲುವು ಪಕ್ಷಪಾತದಿಂದ ಕೂಡಿದೆ ಎಂದು ಆಕ್ಷೇಪಿಸಿದ್ದು, ನಿಷ್ಪಕ್ಷಪಾತ ಮತ್ತು ತಾರತಮ್ಯರಹಿತವಾಗಿ ವರ್ತಿಸುವ ತನ್ನ ಆದೇಶಕ್ಕೆ ಅನುಗುಣವಾಗಿ ಇತರ ಕಡೆಗಳಲ್ಲಿ ನಡೆಯುತ್ತಿರುವ ಗಂಭೀರ ಪ್ರತಿಭಟನೆಗಳತ್ತಲೂ ಗಮನ ಹರಿಸುವುದು ಸೂಕ್ತ ಎಂದು ತಿಳಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಲ್ಯಾಣದ ಸಂಕಟದಲ್ಲಿ ಮರಣವೇ ಮಹಾನವಮಿಸಿಜೆಪಿಗೆ ಕಾಂಗ್ರೆಸ್ ನೆರವು: 'ಖಜಾನೆ ಎಟಿಎಂ ಆಯಿತೇ?' - ಆರ್. ಅಶೋಕ್ ತೀವ್ರ ವಾಗ್ದಾಳಿಎ-ಖಾತಾ ಆಸ್ತಿ ಮಾಲೀಕರಿಗೆ ಮನೆಬಾಗಿಲಲ್ಲೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಅವಕಾಶ!ಗೂಗಲ್ ಮ್ಯಾಪ್ ಹೇಳಿದಂತೆ ಕೇಳಿ ದಾರಿತಪ್ಪಿ ಕಾರು ಸಮೇತ ಕಂದಕಕ್ಕೆ ಬಿದ್ದ ಇನ್ಫೋಸಿಸ್ ಟೆಕ್ಕಿಗಳು!ಲೈಂಗಿಕ ಕಿರುಕುಳ ಆರೋಪ: ತಲೆಮರೆಸಿಕೊಂಡಿದ್ದ ಚರ್ಚ್‌ಪಾದ್ರಿ ಪೋಕ್ಸೋ ಅಡಿಯಲ್ಲಿ ಬಂಧನಹಾರನಕಣಿವೆ ರಂಗನಾಥಸ್ವಾಮಿ ಅಂಬಿನೋತ್ಸವ: ಬುಡಕಟ್ಟು ಸಂಸ್ಕೃತಿ ಮತ್ತು ಪವಾಡದ ಅಪೂರ್ವ ಧಾರ್ಮಿಕ ಸಂಗಮಪ್ರಜ್ಞೆಯ ಜಾಗೃತಿ, ಬದುಕಿನ ಸಂಸ್ಕೃತಿ:ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆ