Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಸಿಲ್ಕ್ ಸಂಸ್ಥೆಯಲ್ಲಿ ಅನಿಶ್ಚಿತತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೇಷ್ಮೆ ಸಚಿವರಾದ ಟಿ.ವೆಂಕಟೇಶ್
ಅವರು ಸದನದಲ್ಲಿ ಉತ್ತರ ನೀಡುವಾಗ ಟಿ. ನರಸಿಪುರದಲ್ಲಿರುವ ಕೆಎಸ್ಐಸಿ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣದ ಪ್ರಸ್ತಾವನೆ ಕೈಬಿಡಲಾಗಿದೆ ಎಂದು ಘೋಷಿಸಿದ್ದರೂ, ಸದರಿ ಭೂಮಿಯ ದಾಖಲೆಗಳು ಇನ್ನೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲೇ ಉಳಿದಿರುವುದು ಅನವಶ್ಯಕ ಗೊಂದಲಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಪ್ರತೀಕವಾದ ಮೈಸೂರು ಸಿಲ್ಕ್ ಗೆ ಸಂಬಂಧಿಸಿದ ಸಂಸ್ಥೆಯ ವಿಷಯದಲ್ಲಿ ಇಂತಹ ವಿಳಂಬ ಮತ್ತು ಅನಿಶ್ಚಿತತೆ ಸಂಸ್ಥೆಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಮಧ್ಯಪ್ರವೇಶಿಸಿ, ಆ ಭೂಮಿಯ ಹಕ್ಕುಪತ್ರಗಳನ್ನು ಕರ್ನಾಟಕ ಸಿಲ್ಕ್ ಇಂಡಸ್ಟ್ರಿಸ್ ಕಾರ್ಪೊರೇಷನ್ (ಕೆಎಸ್ಐಸಿ) ಗೆ ವರ್ಗಾಯಿಸುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು. ಜೊತೆಗೆ ಈ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಲು ಮೈಸೂರು ಜಿಲ್ಲಾಧಿಕಾರಿಗಳಿಗೆ ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಬೇಕು ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

ಇದರ ಜೊತೆಗೆ, ಕರ್ನಾಟಕದ ರೇಷ್ಮೆ ಕ್ಷೇತ್ರದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೆಲವು ದೂರದೃಷ್ಟಿಯ ನಿರ್ಧಾರಗಳನ್ನು ಕೈಗೊಳ್ಳಬೇಕು. ಕೆಎಸ್ಐಸಿ ಕಾರ್ಖಾನೆಯ ಸಮೀಪದಲ್ಲಿ 500 ಎಕರೆ ಭೂಮಿಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಿಲ್ಕ್ ಸಿಟಿಅಭಿವೃದ್ಧಿಪಡಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಸಿಲ್ಕ್ ಸಿಟಿಮುಂದಿನ ದಿನಗಳಲ್ಲಿ:
ರೇಷ್ಮೆ ವ್ಯಾಪಾರ ಮತ್ತು ಜಾಗತಿಕ ಮಾರುಕಟ್ಟೆ ಅಭಿವೃದ್ಧಿ.
ನೇಕಾರರ ಮತ್ತು ಕುಶಲಕರ್ಮಿಗಳ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ. ಕರ್ನಾಟಕದ ಶ್ರೀಮಂತ ರೇಷ್ಮೆ ಪರಂಪರೆಯನ್ನು ಪರಿಚಯಿಸುವ ಪ್ರವಾಸೋದ್ಯಮ. GI ಟ್ಯಾಗ್ ಹೊಂದಿರುವ ಮೈಸೂರು ಸಿಲ್ಕ್ ಮಾರುಕಟ್ಟೆಯ ವಿಸ್ತರಣೆ. ಸೇರಿದಂತೆ ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಬಲ್ಲದು.

ಕರ್ನಾಟಕಕ್ಕೆ ಶತಮಾನಗಳಷ್ಟು ಹಳೆಯ ರೇಷ್ಮೆ ಪರಂಪರೆ ಇದೆ. ಸರಿಯಾದ ದೃಷ್ಟಿಕೋನ ಇದ್ದರೆ ಮತ್ತು ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಪಡಿಸಿದರೆ, ಮೈಸೂರು ವಿಶ್ವದ ಮಟ್ಟದಲ್ಲಿ ಸಿಲ್ಕ್ ರಾಜಧಾನಿಯಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ.

ಆದ್ದರಿಂದ ರಾಜ್ಯ ಸರ್ಕಾರ ಕೆಎಸ್ಐಸಿ ಭೂಮಿಯನ್ನು ರಕ್ಷಿಸಿ, ರೇಷ್ಮೆ ಪರಿಸರ ವ್ಯವಸ್ಥೆಯನ್ನು ಬಲಪಡಿಸಿ, ರೈತರು, ನೇಕಾರರು, ವ್ಯಾಪಾರಿಗಳು ಮತ್ತು ರಾಜ್ಯದ ಆರ್ಥಿಕತೆಗೆ ದೀರ್ಘಕಾಲಿಕವಾಗಿ ಉಪಯೋಗವಾಗುವಂತಹ ವ್ಯವಸ್ಥೆಯನ್ನು ನಿರ್ಮಿಸಬೇಕು ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ