ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಹಾಗೂ ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಉಪಸ್ಥಿತರಿದ್ದರು.
ಭೇಟಿಯ ವೇಳೆ ರಾಜ್ಯದ ಹಾಗೂ ದೇಶದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಕೃಷಿ ವಲಯದ ಪ್ರಗತಿ ಮತ್ತು ರೈತರ ಆರ್ಥಿಕ ಕಲ್ಯಾಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಕೇಂದ್ರ ಕೃಷಿ ಸಚಿವರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.



