Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ರಾಜಕಾರಣದಿಂದ ದೂರ ಸರಿಯಲ್ಲ- ಕೇಂದ್ರ ಸಚಿವ ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ನಾವು ಎನ್‌ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು ಎನ್ನುವುದು ನಮ್ಮ ಉದ್ದೇಶ. ಇದು ನನ್ನ ವೈಯಕ್ತಿಕ ಉದ್ದೇಶ ಎಂದು ಕುಮಾರಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂದು ನಿರಂತರವಾಗಿ ನಾನು ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರ ಬಂದು ಜನತೆ ನೆಮ್ಮದಿಯಿಂದ ಇರಬೇಕು. ಈ ನಿಟ್ಟಿನಲ್ಲಿ ನಾಡಿನ ಜನತೆ ನಾನು ಯಾವ ಸ್ಥಾನದಲ್ಲಿ ಇರಬೇಕು ಅಂತ ತೀರ್ಮಾನ ಮಾಡಿದರೆ ಅದರಂತೆ ನಡೆಯುತ್ತೇನೆ. ಈ ವಿಷಯ ನನ್ನ ಕೈಯಲ್ಲಿ ಇಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.

ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುತ್ತೇನೆಂದು ಯಾರಾದರೂ ತಿಳಿದುಕೊಂಡಿದ್ದರೆ ತಪ್ಪು. ನಾನು ರಾಜ್ಯ ರಾಜಕಾರಣದಿಂದ ದೂರ ಸರಿಯಲ್ಲ. ರಾಜ್ಯದ ರಾಜಕಾರಣದಲ್ಲಿ ಇರುತ್ತೇನೆ. ಕೇಂದ್ರದಲ್ಲಿ ಪ್ರಧಾನಿಗಳು ಉತ್ತಮ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡುತ್ತೇನೆ. ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಮುಖ್ಯ ಕಾರ್ಯದರ್ಶಿ ಸ್ಪಂದಿಸಿಲ್ಲ:
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಸರಿಯಲ್ಲ
, ಶಿಡ್ಲಘಟ್ಟ ಪ್ರಕರಣದ ಬಗ್ಗೆ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿ ಅವರಿಗೆ ತಿಳಿಸಿದ್ದೇನೆ. ಈವರೆಗೆ ಅವರು ಯಾವ ಕ್ರಮವನ್ನು ವಹಿಸಿಲ್ಲ. ಇವತ್ತು ಸಂಕ್ರಾಂತಿ ಹಬ್ಬವಿದೆ. ಹೀಗಾಗಿ ನಾನು ಮತ್ತೆ ಅವರನ್ನು ಕೇಳಲು ಹೋಗಿಲ್ಲ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಮಹಿಳಾ ಅಧಿಕಾರಿಗೆ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ನಿಜಕ್ಕೂ ಬೇಸರ ತರಿಸಿದೆ. ನಮ್ಮ ಪಕ್ಷ ಅಂತಲ್ಲ, ಯಾವುದೇ ಪಕ್ಷದ ಕಾರ್ಯಕರ್ತರು, ಮುಖಂಡರು ಅಧಿಕಾರಿಗಳ ಜತೆ ಅನುಚಿತವಾಗಿ ವರ್ತಿಸಬಾರದು. ಒಂದೆರಡು ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಿದರೆ ಅದು ಪಾಠವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಸಲಹೆ ನೀಡಿದರು.

ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುವ ಪ್ರವೃತ್ತಿ ವ್ಯಾಪಕವಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿರುವ ಮೇಲಿನವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿ ಇಲ್ಲದಿದ್ದಾಗ ಇವೆಲ್ಲ ನಡೆಯುತ್ತವೆ. ಮೇಟಿ ಸರಿಯಾಗಿದ್ದರೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಕುಮಾರಸ್ವಾಮಿ ಆಡಳಿತ ವೈಖರಿ ಟೀಕಿಸಿದರು.

ಅಧಿಕಾರಿಗಳು ಕೂಡ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಬಡ್ತಿ ಅಥವಾ ಪೋಸ್ಟಿಂಗ್​ ಆಸೆಗೆ ಬಿದ್ದು ಕಾನೂನು ಬಾಹಿರ ಕೆಲಸ ಮಾಡಿದರೆ ಪ್ರತಿಫಲ ಅನುಭವಿಸಬೇಕಾಗುತ್ತದೆ. ಇತ್ತೀಚೆಗೆ ಒಂದು ಪತ್ರಿಕೆಯ ಅಗ್ರಬರಹವನ್ನು ಓದಿದೆ.

ಕಳಪೆ ಕಾಮಗಾರಿ;
ಆರು ಮಂದಿ ಹೊಣೆ ಎನ್ನುವ ವರದಿ ನೋಡಿದ ಮೇಲೆ ವಿಕಾಸಸೌಧ ನಿರ್ಮಾಣದಲ್ಲಿ ಎಂಜಿನಿಯರುಗಳು ಅಕ್ರಮ ನಡೆಸಿರುವುದು ಬಯಲಾಗಿದೆ. 8 ವರ್ಷಗಳ ನಂತರ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಅಂತ ಲೋಕಾಯುಕ್ತ ತೀರ್ಪು ಕೊಟ್ಟಿದೆ. ಹೀಗಾಗಿ ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಕೆಲಸ ಮಾಡಬಾರದು. ಸರ್ಕಾರದ ನಿಯಮಾವಳಿ ಉಲ್ಲಂಘನೆ ಆಗದಂತೆ ಆತ್ಮಸಾಕ್ಷಿಗಾಗಿ ಕೆಲಸ ಮಾಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ