Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

 

 

 

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಪ್ರಕರಣ ಸಂಬಂಧ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ವಾಗ್ದಾಳಿ ನಡೆಸಿದ್ದರು.

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಲಘು ಬಾಂಬ್ ಸ್ಫೋಟ ಸಂಭವಿಸಿತ್ತು. ಆಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂದು ಹೇಳಿಕೆ ನೀಡಿದ್ದರು.

ಈ ಸಂಬಂಧ ಮದುರೈ ಪೊಲೀಸರು ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ, ಶೋಭಾ ಕರಂದ್ಲಾಜೆ ಅವರು, ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಲು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದೀಗ ನ್ಯಾ. ಜಿ. ಜಯಚಂದ್ರನ್ ನೇತೃತ್ವದ ನ್ಯಾಯಪೀಠದೆದುರು ಪ್ರಮಾಣ ಪತ್ರ ಸಲ್ಲಿಸಿರುವ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ. ನಾನು ತಮಿಳುನಾಡು ಜನರ ಕುರಿತು ನೀಡಿದ್ದ ಹೇಳಿಕೆಯಲ್ಲಿ ಯಾರದೇ ಭಾವನೆಗಳಿಗೆ ಘಾಸಿಯುಂಟು ಮಾಡುವ ಉದ್ದೇಶವಿರಲಿಲ್ಲ. ನಾನು ಈಗಾಗಲೇ ನನ್ನ ಹೇಳಿಕೆಯನ್ನು ಹಿಂಪಡೆದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈಗಾಗಲೇ ಕ್ಷಮಾಪಣೆ ಕೋರಿದ್ದೇನೆ ಎಂದೂ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನ ಇತಿಹಾಸ ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಗೌರವ ಇದೆ. ತಮಿಳುನಾಡಿನ ಜನರ ಬಗ್ಗೆ ಅಪಾರ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗೆ ಧಕ್ಕೆ ತರುವ ಯಾವುದೇ ಉದ್ದೇಶ ಇರಲಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದಕ್ಕೆ ತಮಿಳುನಾಡು ಜನರಿಗೆ ಕ್ಷಮೆ ಯಾಚಿಸುವೆ ಎಂದಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌