LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು ನಗರದ ರಸ್ತೆ ಕಾಮಗಾರಿಗಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣ

Advertisement
Advertisement

​ ಚಂದ್ರವಳ್ಳಿ ನ್ಯೂಸ್, ತುಮಕೂರು: 
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ತುಮಕೂರು ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

​ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ರಸ್ತೆ ನಿರ್ಮಾಣದ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿ, ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.​

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕ, ಬಿಜೆಪಿ ಮುಖಂಡ ಚಂದ್ರಶೇಖರ್ ಬಾಬು, ಬೈರಪ್ಪ ಈ ಪರಿಶೀಲನಾ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವರೊಂದಿಗೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಅಧಿಕಾರಿಗಳು, ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಾಂತ್ರಿಕ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.​

​"ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ತುಮಕೂರು ನಗರದಲ್ಲಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳ ಪರಿವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕರವರು, ಮುಖಂಡರಾದ ಚಂದ್ರಶೇಖರ್ ಬಾಬು, ಬೈರಪ್ಪ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು."
ವಿ. ಸೋಮಣ್ಣ
, ಕೇಂದ್ರ ಸಚಿವರು.

​ವೇಗ ಗಿಟ್ಟಿಸಲಿರುವ ಕಾಮಗಾರಿ:
ತುಮಕೂರು ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸುಗಮ ಸಂಚಾರಕ್ಕೆ ಈ ರಸ್ತೆ ಕಾಮಗಾರಿಗಳು ಅತ್ಯಂತ ಪ್ರಮುಖವಾಗಿದ್ದು
, ಕೇಂದ್ರ ಸಚಿವರ ಈ ಭೇಟಿಯಿಂದಾಗಿ ಅಭಿವೃದ್ಧಿ ಕೆಲಸಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿವೆ ಎಂದು ಸ್ಥಳೀಯ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಚಿವ ಟಿ. ರಘುಮೂರ್ತಿ ಮಾಲಾರ್ಪಣೆ; ಗೌರವ ನಮನ  ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ- ಟಿ.ರಘುಮೂರ್ತಿಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ  ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆರಘುನಾಥಪುರ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವಹದಗೆಟ್ಟ ರಸ್ತೆ, ಚರಂಡಿ ಶೀಘ್ರ ದುರಸ್ತಿಗೆ ಕನ್ನಡ ಪಕ್ಷ ಆಗ್ರಹಆಗಸ್ಟ್-9ರಂದು ರಾಜ್ಯ ಮಟ್ಟದ ದೇಹ ದಾರ್ಢ್ಯ ಸ್ಪರ್ಧೆಮಳೆ ಬರದಿದ್ದರೆ ಪರಿಹಾರದ ಬಗ್ಗೆ ಸರ್ಕಾರ ಚಿಂತನೆ ಮಾಡಲಿದೆ-ಕೆ.ಹೆಚ್ ಮುನಿಯಪ್ಪಶೀಘ್ರ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ-ಸಚಿವ ರಘುಮೂರ್ತಿಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ "ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಸದನ ನಡೆಯಲು ಬಿಡಲ್ಲ": ಛಲವಾದಿ ನಾರಾಯಣಸ್ವಾಮಿ!