Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈಲು ಕಾರಿಡಾರ್‌ಗಳ ಪ್ರಗತಿ ವಿವರ ಹಂಚಿಕೊಂಡ ಕೇಂದ್ರ ಸಚಿವ ವಿ. ಸೋಮಣ್ಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯ ಸಂಚಾರ ದಟ್ಟಣೆಗೆ ಪ್ರಮುಖ ಪರ್ಯಾಯ ಮಾರ್ಗ ಎಂದೇ ಬಿಂಬಿತವಾಗಿರುವ
'ಬೆಂಗಳೂರು ಸಬ್‌ಅರ್ಬನ್‌ರೈಲು ಯೋಜನೆ'ಯ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಈ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸಾಮಾಜಿಕ ಜಾಲತಾಣಗಳಲ್ಲಿ ಯೋಜನೆಯ ಮಹತ್ವದ ಪ್ರಗತಿಯ ವಿವರಗಳನ್ನು ಹಂಚಿಕೊಂಡಿದ್ದಾರೆ.

​ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬದ್ಧತೆಯಿಂದಾಗಿ ಯೋಜನೆ ಚುರುಕುಗೊಂಡಿದ್ದು, ಬೆಂಗಳೂರಿನ ಸಂಚಾರ ವ್ಯವಸ್ಥೆಯ ಚಿತ್ರಣವೇ ಬದಲಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

​ಸಚಿವರು ಹಂಚಿಕೊಂಡಿರುವ ನಾಲ್ಕೂ ಕಾರಿಡಾರ್‌ಗಳ ಸದ್ಯದ ತಾಜಾ ಮಾಹಿತಿ ಈ ಕೆಳಗಿನಂತಿದೆ.

ನಾಲ್ಕು ಕಾರಿಡಾರ್‌ಗಳ ಇತ್ತೀಚಿನ ಪ್ರಗತಿ:
​ಕಾರಿಡಾರ್-1 (ದೇವನಹಳ್ಳಿ ಏರ್‌ಪೋರ್ಟ್ ಮಾರ್ಗ): ಈ ಪ್ರಮುಖ ಮಾರ್ಗಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು
, ಪ್ರಾಥಮಿಕ ಸಮೀಕ್ಷಾ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.

​ಕಾರಿಡಾರ್-2 ಮತ್ತು 4: ಈ ಮಾರ್ಗಗಳಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಮುಗಿದಿದೆ. ಸದ್ಯ ರೈಲ್ವೆ ನಿಲ್ದಾಣಗಳು ಮತ್ತು ವಯಡಕ್ಟ್ (ಮೇಲ್ಸೇತುವೆ) ನಿರ್ಮಾಣ ಕಾರ್ಯಗಳು ವೇಗವಾಗಿ ಪ್ರಗತಿಯಲ್ಲಿವೆ.

​ಕಾರಿಡಾರ್-3: ಈ ಮಾರ್ಗದ ವಿನ್ಯಾಸಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಮುಂದಿನ ಹಂತದ ಕಾಮಗಾರಿಗಳಿಗೆ ಸಿದ್ಧತೆ ನಡೀತಾ ಇದೆ.

ಮಲ್ಟಿ-ಮಾಡಲ್ ಕನೆಕ್ಟಿವಿಟಿ (ಸಂಯೋಜಿತ ಸಾರಿಗೆ):
​ಈ ಸಬ್‌ಅರ್ಬನ್‌ರೈಲು ಕೇವಲ ಸ್ವತಂತ್ರ ರೈಲು ಮಾರ್ಗವಾಗಿ ಉಳಿಯದೆ
, ನಗರದ ಒಟ್ಟಾರೆ ಸಾರಿಗೆ ವ್ಯವಸ್ಥೆಯನ್ನು ಬೆಸೆಯಲಿದೆ.
​ನಮ್ಮ ಮೆಟ್ರೋ- ​ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ​ನಗರದ ಪ್ರಮುಖ ಭಾರತೀಯ ರೈಲ್ವೆ ನಿಲ್ದಾಣಗಳು, ​ಬೆಂಗಳೂರಿನ ಪ್ರಮುಖ ಐಟಿ ಹಬ್‌ಗಳನ್ನು ಪರಸ್ಪರ ಸಂಪರ್ಕಿಸಲಿದೆ.

​ಸಚಿವರ ಮಾತು: "ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ನಮ್ಮ ಸರ್ಕಾರದ ಬದ್ಧತೆಯಿಂದ ಬೆಂಗಳೂರು ಸಬ್‌ಅರ್ಬನ್‌ರೈಲು ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಪ್ರಮುಖ ಐಟಿ ಹಬ್‌ಗಳು ಹಾಗೂ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಈ ಯೋಜನೆ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಚಿತ್ರಣವನ್ನೇ ಬದಲಾಯಿಸಲಿದೆ" ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.

​ಈ ಯೋಜನೆಯು ಪೂರ್ಣಗೊಂಡರೆ ಬೆಂಗಳೂರಿನ ರಸ್ತೆಗಳ ಮೇಲಿನ ವಾಹನ ದಟ್ಟಣೆ ಗಣನೀಯವಾಗಿ ಕಡಿಮೆಯಾಗಲಿದ್ದು, ಐಟಿ ಉದ್ಯೋಗಿಗಳು ಹಾಗೂ ನಿತ್ಯ ಪ್ರಯಾಣಿಕರಿಗೆ ವರದಾನವಾಗಲಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!