Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ವಿವಿಧತೆಯಲ್ಲಿ ಏಕತೆ ಭಾರತದ ವಿಶೇಷತೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ವಿವಿಧತೆಯಲ್ಲಿ ಏಕತೆ ಭಾರತದ ವಿಶೇಷತೆ" ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಆಯೋಜಿಸಿದ್ದ "ಬಿಹಾರ್ ದಿವಸ್" ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾಗವಹಿಸಿದ್ದರು.

 ಬಿಹಾರ- ಕರ್ನಾಟಕದ ಜನರು ಜೊತೆ ಸೇರಿ ಬಿಹಾರ ದಿವಸ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದ್ದು, ಪ್ರಯಾಗ್‍ರಾಜ್‍ನ ಮಹಾ ಕುಂಭದಲ್ಲಿ ಬಿಹಾರದ ಜನರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರ. ವಿವಿಧ ಜಾತಿ, ಧರ್ಮದ ಜನರು ಇಲ್ಲಿ ನೆಲೆಸಿದ್ದಾರೆ. ಹಲವು ಭಾಷೆಗಳಿದ್ದರೂ ಭಾರತವು ಅಖಂಡತೆಯನ್ನು ಉಳಿಸಿಕೊಂಡು ಸರ್ವಶ್ರೇಷ್ಠ ರಾಷ್ಟ್ರವಾಗಿದೆ ಎಂದು ಅವರು ಹೇಳಿದರು.

ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ, ಕಾರ್ಯವೈಖರಿ, ಅನುಷ್ಠಾನದ ಕ್ರಮವು ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮುವಂತೆ ಮಾಡಿದೆ. ಬಿಹಾರದ ಜನತೆ, ಕನ್ನಡಿಗರೂ ಸೇರಿದಂತೆ ಎಲ್ಲ ರಾಜ್ಯದವರು ಸೇರಿ ಭಾರತವನ್ನು 2047ರ ವೇಳೆಗೆ ವಿಕಸಿತ ಭಾರತವನ್ನಾಗಿ ಮಾಡಲು ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಗಿದೆ ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಬಿಹಾರದ ನವಾಡಾದ ಸಂಸದರಾದ ವಿವೇಕ್ ಠಾಕೂರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಬಿಹಾರ ದಿವಸ್ ಉಸ್ತುವಾರಿಗಳಾದ  ಮುರುಗೇಶ್ ನಿರಾಣಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ  ತಮ್ಮೇಶ್ ಗೌಡ, ಶರಣು ತಳ್ಳಿಕೆರೆ, ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಬಿಹಾರ ರಾಜ್ಯ ಕಾರ್ಯದರ್ಶಿ ರತ್ನೇಶ್ ಕುಸ್‍ಹಾ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಆನಂದ್ ಅವರು ಸೇರಿದಂತೆ ಬೆಂಗಳೂರಿನಲ್ಲಿ ನೆಲೆಸಿರುವ ಬಿಹಾರ ರಾಜ್ಯದ ನಿವಾಸಿಗಳು ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು