ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವ ಬೆಂಗಳೂರಿನ ನಿರ್ಮಾಣ ಹಾಗೂ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲಾ ಜನಪ್ರತಿನಿಧಿಗಳು ಒಂದಾಗಿ ಶ್ರಮಿಸುವ ಅಗತ್ಯವಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರು ವ್ಯಾಪ್ತಿಯ ಸಚಿವರು, ಶಾಸಕರು ಹಾಗೂ ಹಿರಿಯ ನಾಯಕರು ಭಾಗವಹಿಸಿದ್ದರು.
ಸಭೆಯಲ್ಲಿ ನಗರದ ಮೂಲಸೌಕರ್ಯ ಮೇಲ್ದರ್ಜೆಗೇರಿಸುವುದು, ಭವಿಷ್ಯದ ಬೆಳವಣಿಗೆ ಹಾಗೂ ಸಾರ್ವಜನಿಕ ಆದ್ಯತೆಯ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. 'ಬಲವಾದ ಹಾಗೂ ಸುಸಜ್ಜಿತ ಬೆಂಗಳೂರು ನಿರ್ಮಾಣ' ನಮ್ಮೆಲ್ಲರ ಜಂಟಿ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಯಿತು.




