ಚಂದ್ರವಳ್ಳಿ ನ್ಯೂಸ್, ಗುಬ್ಬಿ:
ತಾಲೂಕಿನ ಚೇಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸೇವಾ ಸಂಕಲ್ಪ ಅಭಿಯಾನ’ದಡಿಯ ‘ಬೂತ್ ವಿಜಯ ಸಂಕಲ್ಪ ಯಾತ್ರೆ’ಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶದಲ್ಲಿ ಅಪಾರ ಪ್ರಮಾಣದ ಜನಸಾಗರವೇ ಹರಿದುಬಂದಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, "ಪಾದಯಾತ್ರೆ ಮತ್ತು ಸಮಾವೇಶದಲ್ಲಿ ಸಾರ್ವಜನಿಕರು ಹಾಗೂ ಯುವಶಕ್ತಿ ತೋರಿದ ಉತ್ಸಾಹ-ಹುಮ್ಮಸ್ಸು ಪಕ್ಷದ ಸಂಘಟನಾ ಕಾರ್ಯಕ್ಕೆ ಹೆಚ್ಚಿನ ಶಕ್ತಿ ತುಂಬಿದೆ.
ಬೂತ್ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸಶಕ್ತಗೊಳಿಸಿ, ಪ್ರಧಾನಿ ನರೇಂದ್ರ ಮೋದಿ ಅವರ 'ವಿಕಸಿತ ಭಾರತ'ದ ಪರಿಕಲ್ಪನೆಯನ್ನು ಪ್ರತಿಯೊಂದು ಮನೆಗೆ ತಲುಪಿಸುವುದೇ ನಮ್ಮ ಪ್ರಮುಖ ಸಂಕಲ್ಪವಾಗಿದೆ" ಎಂದು ಹೇಳಿದರು.
ಈ ಬೃಹತ್ ಪಾದಯಾತ್ರೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಹುಲಿನಾಯ್ಕರ್, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಗುಬ್ಬಿ ತಾಲೂಕು ಅಧ್ಯಕ್ಷ ದಿಲೀಪ್ ಕುಮಾರ್, ಕಾರ್ಯದರ್ಶಿ ವಿನಯ್ ಬಿದರೆ, ಅಂಬಿಕಾ ಹುಲಿನಾಯ್ಕರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದರು.




