ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಾಯಿತು.
ಮುಖ್ಯಮಂತ್ರಿಗಳು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಜಂಟಿಯಾಗಿ ಈ ಭವ್ಯ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪ್ರಮುಖರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸಂಸದ ಡಾ. ಕೆ. ಸುಧಾಕರ್, ಶಾಸಕರಾದ ಶರತ್ ಬಚ್ಚೇಗೌಡ, ಆನೇಕಲ್ ಶಿವಣ್ಣ, ಎನ್. ಶ್ರೀನಿವಾಸ್, ಧೀರಜ್ ಮುನಿರಾಜು ಹಾಗೂ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ರವಿ ಮತ್ತಿತರರು ಇದ್ದರು.
ಜಿಲ್ಲಾಡಳಿತ ಭವನದ ಸೌಂದರ್ಯವನ್ನು ಹೆಚ್ಚಿಸಿರುವ ಈ 14 ಅಡಿ ಎತ್ತರದ ಕಂಚಿನ ಪ್ರತಿಮೆಯು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರುವ ಸಾಂಕೇತಿಕ ಹೆಜ್ಜೆಯಾಗಿದೆ ಎಂದು ಗಣ್ಯರು ಈ ಸಂದರ್ಭದಲ್ಲಿ ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಾರು ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.



