Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪ್ಪರಿಗೇನಹಳ್ಳಿ ಪಿಡಿಒ ಅಮಾನತು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಿಯಮಬಾಹೀರವಾಗಿ ಕ್ರಿಯಾ ಯೋಜನೆ ಮಂಜೂರಾತಿ, ಅಕ್ರಮವಾಗಿ ಇ-ಸ್ವತ್ತು ವಿತರಣೆ, ಹಣದ ದುರಪಯೋಗ, ಸೇರಿದಂತೆ ಹಲವು ಆರೋಪಗಳ ಹಿನ್ನಲೆಯಲ್ಲಿ ಹೊಳಲ್ಕೆರೆ ತಾಲ್ಲೂಕು ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಜಿ.ಎಂ. ಕರಿಯಪ್ಪ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಉಪ್ಪರಿಗೇನಹಳ್ಳಿ ಪಿಡಿಓ ಜಿ.ಎಂ.ಕರಿಯಪ್ಪ ಅವರು, ಗ್ರಾ.ಪಂ. ಸಭೆಯಲ್ಲಿ ಚರ್ಚಿಸದೆ ನಿಯಮಬಾಹಿರವಾಗಿ ವಿವಿಧ ಯೋಜನೆಗಳಡಿ ಕ್ರಿಯಾ ಯೋಜನೆಗಳನ್ನು ತಯಾರಿಸಿ ಅನುದಾನ ಖರ್ಚು ಮಾಡಿ, ಅನುದಾನದವನ್ನು ಸಂಪೂರ್ಣವಾಗಿ ದುರಪಯೋಗ ಪಡಿಸಿಕೊಂಡಿರುತ್ತಾರೆ.

15ನೇ ಹಣಕಾಸು ಆಯೋಗ ಕ್ರಿಯಾ ಯೋಜನೆಯ ಅಂದಾಜು ಪಟ್ಟಿ, ಎಂ.ಬಿ. ರೆಕಾರ್ಡ್, ಚೆಕ್ ಮೆಜರ್‍ಮೆಂಟ್ ಮೇಲಾಧಿಕಾರಿಗಳ ಸಹಿ ಇಲ್ಲದೆ ವೋಚರ್ ಮತ್ತು ಕೊಟೇಷನ್ ಇಲ್ಲದೇ, ತುಲನಾತ್ಮಕ ಪಟ್ಟಿಗೆ ಅನುಮೋದನೆ ನೀಡಿ, ಅಕ್ರಮವಾಗಿ ಹಣ ಪಾವತಿ ಮಾಡಿದ್ದಾರೆ.

ಕುಡಿಯುವ ನೀರಿನ ಮತ್ತು ವಿದ್ಯುತ್ ಸಾಮಗ್ರಿಗಳ ಖರೀದಿಯಲ್ಲಿ ಕೆ.ಪಿ.ಟಿ.ಟಿ ಆಕ್ಟ್ ಖರೀದಿ ನಿಯಮಗಳ  ಉಲ್ಲಂಘನೆ ಮಾಡಿರುತ್ತಾರೆ. ಈ ಹಿನ್ನಲೆಯಲ್ಲಿ ಜಿ.ಪಂ. ಲೆಕ್ಕಾಧಿಕಾರಿಗಳು ತನಿಖೆ ನಡೆಸಿ ಕರ್ತವ್ಯ ಲೋಪದ ಆಧಾರದ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿರುತ್ತಾರೆ.

ಇದರನ್ವಯ ಜಿ.ಪಂ. ಸಿಇಓ ಎಸ್.ಜೆ. ಸೋಮಶೇಖರ್ ಅವರು, ಪಿಡಿಓ ಜಿ.ಎಂ.ಕರಿಯಪ್ಪ ವಿರುದ್ದ ಇಲಾಖೆ ವಿಚಾರಣೆ ಕಾಯ್ದಿರಿಸಿ ಅನುಮಾನತು ಮಾಡಿ ಆದೇಶಿಸಿದ್ದಾರೆ.  

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ