Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಒತ್ತಾಯ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರವು ಅತಿ ವೇಗವಾಗಿ ಬೆಳೆಯುತ್ತಿರುವ ಬೆನ್ನಲ್ಲೇ ಕಳ್ಳತನ
, ದರೋಡೆ ಮತ್ತು ಪುಂಡರ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿನಿಯರ ರಕ್ಷಣೆಗಾಗಿ ನಗರದ ಎಲ್ಲಾ ವಾರ್ಡ್‌ಗಳು ಮತ್ತು ಮುಖ್ಯ ಸರ್ಕಲ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ನಗರಸಭೆ ಮ್ಯಾನೇಜರ್ ಮಂಜುಳಾ ಅವರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿನಿಯರಲ್ಲಿ ಹೆಚ್ಚಿದ ಭಯದ ವಾತಾವರಣ-
ಮನವಿ ಸಲ್ಲಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ಕೆ. ರಾಮಚಂದ್ರಪ್ಪ
, "ಹಿರಿಯೂರು ನಗರದಲ್ಲಿ ಹಿಂದೆ ಪ್ರಧಾನ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಆದರೆ ಪ್ರಸ್ತುತ ನಗರದ ಹೊರವಲಯಗಳಲ್ಲಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳಿದ್ದು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ದಿನನಿತ್ಯ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯುವ ಮುನ್ನವೇ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದರೆ, ಪೊಲೀಸ್ ಇಲಾಖೆಗೆ ನಿಗಾ ಇಡಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರಿಯಾಗುತ್ತದೆ," ಎಂದು ತಿಳಿಸಿದರು.

Advertisement

ದುಶ್ಚಟಗಳು ಹಾಗೂ ಪುಂಡರ ಹಾವಳಿಗೆ ಬ್ರೇಕ್ ಹಾಕಿ
ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ ಮಾತನಾಡಿ
, ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಯುವಕರು ಡ್ರಗ್ಸ್, ಅಫೀಮು, ಗಾಂಜಾ, ಮದ್ಯ ಹಾಗೂ ಸೆಲ್ಯೂಷನ್‌ನಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಮುಖ್ಯ ಸರ್ಕಲ್‌ಗಳಲ್ಲಿ ಗುಂಪು ಕಟ್ಟಿಕೊಂಡು ನಿಲ್ಲುವ ಪುಂಡರು ರಸ್ತೆಯಲ್ಲಿ ಓಡಾಡುವ ಯುವತಿಯರನ್ನು ಮತ್ತು ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದಾರೆ. ಕಳ್ಳತನ ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಸಂಚಾರವೂ ಹೆಚ್ಚಾಗಿದ್ದು, ಗಲಾಟೆ-ಗಲಭೆಗಳು ಸಂಭವಿಸುವ ಮುನ್ನವೇ ನಗರಾಡಳಿತ ಎಚ್ಚೆತ್ತುಕೊಂಡು ಮುಖ್ಯ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ. ರಾಮಚಂದ್ರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್., ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸಾಧಿಕ್, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣ್ ರಾವ್ ಮತ್ತು ಕೆಂಚಪ್ಪ, ತಾಲೂಕು ಅಧ್ಯಕ್ಷ ಕೆ. ಓಂಕಾರ ಮೂರ್ತಿ, ಯುವ ಘಟಕದ ತಾಲೂಕು ಅಧ್ಯಕ್ಷ ಎಚ್.ಎನ್. ಅಶೋಕ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು