Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ಆಯವ್ಯಯದಲ್ಲಿ  ಹಿರಿಯ ಪತ್ರಕರ್ತ "ವಡ್ಡರ್ಸೆ ರಘುರಾಮಶೆಟ್ಟಿ" ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.

ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ  ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ:
ಮಾರ್ಚ್ 18, 1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ., ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ್ಯಾಂಕ್ ಪಡೆದವರು.

ನ್ಯೂ ಇಂಡಿಯನ್ ಎಕ್ಸಪ್ರೆಸ್  ಸಮೂಹ ಸಂಸ್ಥೆಯ ಕನ್ನಡಪ್ರಭ, ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ, ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ನ್ಯಾಯಪಥ(ಗೌರಿ ಮಿಡಿಯಾ)ಮತ್ತು ಈದಿನವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ದೆಹಲಿ ನೋಟ’, ‘ಪದಕುಸಿಯೇ ನೆಲವಿಲ್ಲಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ