Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಜಯಂತಿ: ಅದ್ಧೂರಿ ಮೆರವಣಿಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಗುರುವಾರ ನಗರದಲ್ಲಿ ನಡೆದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ಸಡಗರ-ಸಂಭ್ರಮದಿಂದ ಭವ್ಯ ಮೆರವಣಿಗೆ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ನಾಯಕ ಸಮಾಜದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.

  ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಅವರು ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಐತಿಹಾಸಿಕ ಕೋಟೆ ಮುಂಭಾಗದಿಂದ ಆರಂಭವಾದ ಅದ್ದೂರಿ ಮೆರವಣಿಗೆಯು, ಏಕನಾಥೇಶ್ವರಿ ದೇವಸ್ಥಾನ, ಹುಚ್ಚೆಂಗಿಯಲ್ಲಮ್ಮ ದೇವಸ್ಥಾನದ ಮುಂಭಾಗದಿಂದ ಆನೆಬಾಗಿಲು, ಗಾಂಧಿವೃತ್ತ, ಎಸ್‍ಬಿಐ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ನಗರದ ತರಾಸು ರಂಗಮಂದಿರದವರೆಗೆ ನಡೆಯಿತು.

   ಮೆರವಣಿಗೆಯಲ್ಲಿ ಖಾಸ ಬೇಡರ ಪಡೆ, ಕಹಳೆ ವಾದನ, ತ್ರಾಷ್ ಡೋಲು, ಗೊಂಬೆ ಕುಣಿತ, ಕರಡಿ ಮಜಲು, ಪಟ ಕುಣಿತ ಮೆರವಣಿಗೆಯ ಮೆರಗು ಹೆಚ್ಚಿಸುವ ಮೂಲಕ ಸಾಂಸ್ಕøತಿಕ ರಂಗವನ್ನು ತುಂಬಿದವು.

 ಈ ಸಂದರ್ಭದಲ್ಲಿ  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ.ಎಸ್.ಮಂಜುಳ, ನಗರಸಭೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಬಾಂಧವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ