Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಶಾಸಕ ಗಣೇಶ್‌ಗೆ ಸಚಿವ ಸ್ಥಾನ ನೀಡಲು ವಾಲ್ಮೀಕಿ ಸಮಾಜ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಕಂಪ್ಲಿ:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಹಕ್ಕೊತ್ತಾಯ ವಿಜಯನಗರ ಜಿಲ್ಲೆಯಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಹೊಸಪೇಟೆ ತಾಲೂಕಿನ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ವಿವಿಧ ಸಮಾಜಗಳ ಮುಖಂಡರು ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ನಗರದ ಸಂಡೂರು ರಸ್ತೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಜಂಬನಳ್ಳಿ ಸೊಸೈಟಿ ರಾಮಣ್ಣ ರವರು ಮಾತನಾಡಿ ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ವಾಲ್ಮೀಕಿ ಸಮಾಜದ ಜನಸಂಖ್ಯೆ ಗಣನೀಯವಾಗಿದ್ದು, ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯಬೇಕಾಗಿದೆ ಎಂದು ಒತ್ತಾಯಿಸಿದರು.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ವಿಧಾನಸೌಧದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ನಿರಂತರವಾಗಿ ಪ್ರಸ್ತಾಪಿಸಿ, ಜನಪರ ಹೋರಾಟಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇಂತಹ ಜನನಾಯಕನಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಇದರಿಂದ ವಾಲ್ಮೀಕಿ ಸಮಾಜ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಹೇಳಿದರು.

ಸರ್ಕಾರವು ವಾಲ್ಮೀಕಿ ಸಮಾಜದ ಭಾವನೆಗಳನ್ನು ನಿರ್ಲಕ್ಷಿಸಿ ಬೇರೆ ಸಮುದಾಯದವರಿಗೆ ಸಚಿವ ಸ್ಥಾನ ನೀಡಿದರೆ ಉಗ್ರ ಹೋರಾಟ ನಡೆಸಲಾಗುವುದು. ಅಗತ್ಯವಿದ್ದರೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಘೇರಾವ್ ಹಾಕಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ಗೋಸಲ ಬರಾಮಪ್ಪ, ಜುಲೈ 3ರಂದು ಹೊಸಪೇಟೆ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ವಿವಿಧ ಸಮಾಜಗಳ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ಹಾಗೂ ಮೆರವಣಿಗೆ ನಡೆಸಲಿದ್ದಾರೆ ಎಂದು ತಿಳಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಲಾಗುವುದು. ವಾಲ್ಮೀಕಿ ಸಮಾಜದ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಿ ಶಾಸಕ ಜೆ.ಎನ್. ಗಣೇಶ್ ಅವರಿಗೆ ಸಚಿವ ಸ್ಥಾನ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಹೊಸಪೇಟೆ ತಾಲೂಕು ನಾಯಕ ಸಮಾಜದ ವತಿಯಿಂದ ಜುಲೈ 6ರಂದು ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಸಚಿವ ಸ್ಥಾನಕ್ಕಾಗಿ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಯುವ ಮುಖಂಡರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.