Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದಕರಿ ನಾಯರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಬೇಡ- ವಾಲ್ಮೀಕಿ ಸ್ವಾಮೀಜಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗವನ್ನು ಆಳ್ವಿಕೆ ಮಾಡಿದ ಮದಕರಿ ನಾಯಕರು ಕೇವಲ ಒಂದು ಜಾತಿಗೆ ಸೀಮಿತ ಮಾಡುವುದು ಬೇಡ
, ಮದಕರಿ ನಾಯಕರು ಸದಾ ಜಾತ್ಯಾತೀತ ನಾಯಕನಾಗಿದ್ದು ಆಡಳಿತ ಮಾಡಿದ್ದಾರೆ ಎಂದು ವಾಲ್ಮೀಕಿ ಗುರಪೀಠದ ಶ್ರೀ ವಾಲ್ಮಿಕಿ ಪ್ರಸನ್ನಾನಂದ ಶ್ರೀಗಳು ಹೇಳಿದರು.

ನಗರದ ರಾಜ ವೀರ ಮದಕರಿ ನಾಯಕ ವೃತ್ತದಲ್ಲಿ ಭಾನುವಾರ ನಡೆದ ರಾಜ ವೀರ ಮದಕರಿ ಜಯಂತಿ ಕಾರ್ಯಕ್ರಮದಲ್ಲಿ ಮದಕರಿ ಪ್ರತಿಮೆ ಪುಷ್ಪಾರ್ಚಣೆ ಮಾಡಿ ಮಾತನಾಡಿದ ಶ್ರೀಗಳು, ಚಿತ್ರದುರ್ಗ ಆಳಿದ ನಾಡದೂರೆ ರಾಜ ವೀರ ಮದಕರಿನಾಯಕರ ಜಂಯತೋತ್ಸವವನ್ನು ಅತಂತ್ಯ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಮೊಗಲರ ದಾಳಿಯನ್ನು ಸಮರ್ಥವಾಗಿ ಎದುರಿಸಿ ಸುತ್ತಾ-ಮುತ್ತಲ್ಲಿನ ವೈರಿಗಳನ್ನು ಹಿಮೆಟ್ಟಿಸಿ ಚಿತ್ರದುರ್ಗವನ್ನು ಮದಕರಿ ನಾಯಕ ಹಲವು ವರ್ಷಗಳ ಕಾಲ ಆಳ್ವಿಕೆ ನಡೆಸಿ ಒಬ್ಬ ಜಾತ್ಯಾತೀತ ನಾಯಕರೆನಿಸಿಕೊಂಡಿರುವ ಮದಕರಿ ನಾಯಕರ ಆದರ್ಶಗಳನ್ನು ನಾವು ನೀವೆಲ್ಲ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಚಿತ್ರದುರ್ಗದಲ್ಲಿ ಮದಕರಿ ನಾಯಕರ ಜಯಂತಿಯನ್ನು ಈ ವರ್ಷ ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷ ಮದಕರಿ ನಾಯಕ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಮದಕರಿ ಜಯಂತಿ ಅಚರಣೆಯ ಬಗ್ಗೆ ತೀರ್ಮಾನ ತೆಗೆದುಕೊಂಡು ಎಲ್ಲರನ್ನು ಜೊತೆಗೂಡಿಸಿ ಆಚರಣೆ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು.

ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್, ಜೆಡಿಎಸ್‌ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಬಿಜೆಪಿ ಮುಖಂಡರಾದ ರತ್ನಮ್ಮ, ಸೋಮು,

ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಕಾಟೇಹಳ್ಳಿ ಕರಿಯಣ್ಣ, ಜಿ.ಟಿ ರಾಜೇಶ್, ನಗರಸಭಾ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಅಹೋಬಲ ಶೋ ರೂಂ ಮಾಲೀಕ ಅರುಣ್ ಕುಮಾರ್, ಅಜೆಯ ಮದಕರಿ, ದರ್ಶನ್, ತಿಪ್ಪೇಸ್ವಾಮಿ, ರಾಜ ಮದಕರಿ ನಾಯಕ, ಕಿರಣ್, ಸಿರುವಲ್ಲಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ