ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಾರಿಕಣಿವೆ (ವಾಣಿ ವಿಲಾಸ ಸಾಗರ) ಕಡೆಯಿಂದ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ನಾಯಕನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ 711 ಎಂಎಂಎಂಎಸ್ ಪೈಪ್ಲೈನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಹಿರಿಯೂರಿನ ಜಡ್ಜ್ ಕ್ವಾಟ್ರರ್ಸ್ ಹಿಂಭಾಗದಲ್ಲಿ ಈ ಪೈಪ್ಲೈನ್ ದುರಸ್ತಿ ಕೆಲಸ ನಡೆಯುತ್ತಿರುವುದರಿಂದ, ಕಾಮಗಾರಿ ಪೂರ್ಣಗೊಳ್ಳುವವರೆಗೆ ನೀರು ಸರಬರಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯೂರು ನಗರಸಭೆಯ ಪೌರಾಯುಕ್ತರಾದ ಎ. ವಾಸೀಂ ತಿಳಿಸಿದ್ದಾರೆ.
ಯಾವೆಲ್ಲಾ ಪ್ರದೇಶಗಳಲ್ಲಿ ನೀರು ವ್ಯತ್ಯಯ?:
ಹಿರಿಯೂರು ನಗರ ಹಾಗೂ ಜಡ್ಜ್ ಕ್ವಾರ್ಟರ್ಸ್ ಸುತ್ತಮುತ್ತಲಿನ ಪ್ರದೇಶಗಳು ಚಿತ್ರದುರ್ಗ ನಗರ, ಚಳ್ಳಕೆರೆ, ನಾಯಕನಹಟ್ಟಿ, ಮಾರ್ಗಮಧ್ಯದ ಸುತ್ತಮುತ್ತಲಿನ ಹಳ್ಳಿಗಳು.
ಪೈಪ್ಲೈನ್ ದುರಸ್ತಿ ಕಾರ್ಯ ಪೂರ್ಣಗೊಂಡ ತಕ್ಷಣವೇ ಎಂದಿನಂತೆ ನಿಯಮಿತವಾಗಿ ನೀರು ಸರಬರಾಜನ್ನು ಪುನರಾರಂಭಿಸಲಾಗುವುದು. ಸಾರ್ವಜನಿಕರು ಹಾಗೂ ನೀರು ಬಳಕೆದಾರರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.




