ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ನಿರ್ವಹಣೆಯ ಕೆಲಸ ನಿರ್ವಹಿಸುವ ಸಲುವಾಗಿ ಎರಡು ದಿನಗಳ ಕಾಲ ಮೇ 31 ಮತ್ತು ಜೂನ್ 01ರಂದು ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಉಪಯೋಗಿಸಲು ಕೋರಿದೆ.
ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.



